ಸಂಸ್ಕೃತ, ಸಂಸ್ಕೃತಿ, ಸಾಹಿತ್ಯ ಕ್ಷೇತ್ರದಲ್ಲಿನ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಅಕ್ಟೋಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹10 ಸಾವಿರ ನಗದು, ಸ್ಮರಣಿಕೆ ಹಾಗೂ ಗ್ರಂಥಗಳನ್ನು ಒಳಗೊಂಡಿದೆ ಎಂದು ಮೈತ್ರೀ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.