ಬೆಂಗಳೂರು: ‘ಮಲೇಷ್ಯಾ ಮರಳಿನ ಗುಣಮಟ್ಟವನ್ನು ಸಮಗ್ರವಾಗಿ ಪರಿಶೀಲನೆ ಮಾಡಿ ಮುಂದೆ ಆಮದು ಮಾಡಿಕೊಳ್ಳಬೇಕೇ ಬೇಡವೇ ಎಂಬ ನಿರ್ಧಾರಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಅರಣ್ಯ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಮಲೇಷ್ಯಾ ಮರಳಿನ ತಾಳಿಕೆ ಮತ್ತು ಬಾಳಿಕೆ ಬಗ್ಗೆ ಖಾತರಿ ಪಡೆದು ಬಳಿಕ ಮುಖ್ಯಮಂತ್ರಿ ಜತೆ ಸಮಾಲೋಚನೆ ನಡೆಸಲಾಗುವುದು’ ಎಂದರು.

‘ರಾಜ್ಯದಲ್ಲಿ ಸದ್ಯ ಬೇಡಿಕೆಗೆ ತಕ್ಕಷ್ಟು ಮರಳು ಪೂರೈಕೆಯಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನೆರೆ ಉಂಟಾದಾಗ ನದಿ ಪಕ್ಕದ ಜಮೀನುಗಳಲ್ಲೂ ಮರಳು ಶೇಖರಣೆಯಾಗಿದೆ. ಅದನ್ನು ಭೂಮಾಲೀಕರು ಬಳಸಿಕೊಂಡು ಉಳಿಕೆ ಮರಳು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

‘ಹಿಂದಿನ ಸರ್ಕಾರದ ಅವಧಿಯಲ್ಲಿ ಎಂಎಸ್ಐಎಲ್ ಮೂಲಕ ಮರಳು ಆಮದು ಮಾಡಿಕೊಳ್ಳಲಾಗಿದೆ. ಇದರಲ್ಲಿ ಅಕ್ರಮ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಅವಕಾಶ ನೀಡಿಲ್ಲ. ಯಾವುದೇ ಒತ್ತಡಕ್ಕೂ ಮಣಿಯುವ ಪ್ರಶ್ನೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

‘ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ಕೋರಿ ಯಾರೊಬ್ಬರೂ ಒತ್ತಡ ಹೇರಿಲ್ಲ. ಹಾಗೆಯೇ, ಆ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೂ ಅವಕಾಶವಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.