ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲತ್ತಹಳ್ಳಿ ಕೆರೆ ತೂಗುಸೇತುವೆ ಕಾಮಗಾರಿ: ತಾತ್ಕಾಲಿಕ ತಡೆ

Last Updated 24 ನವೆಂಬರ್ 2022, 20:05 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಮಲ್ಲತ್ತಹಳ್ಳಿ ಕೆರೆ ಪ್ರದೇಶದಲ್ಲಿ ಮನರಂಜನಾ ಉದ್ಯಾನ ನಿರ್ಮಿಸುವ ಉದ್ದೇಶದಿಂದ ಕೈಗೊಂಡಿದ್ದ ಗಾಜಿನ ಮನೆ, ತೂಗು ಸೇತುವೆ ಮತ್ತು ಮಕ್ಕಳ ಆಟದ ರೈಲಿಗೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗುವುದು‘ ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್‌ಗೆ ತಿಳಿಸಿದೆ.

ನಗರದ ಕೆರೆಗಳ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಿಟಿ ಜನ್ ಆ್ಯಕ್ಷನ್ ಗ್ರೂಪ್ ಮತ್ತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್‌ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹೆಚ್ಚುವರಿ ಸರ್ಕಾರಿ ವಕೀಲ ಲಕ್ಷ್ಮಿನಾರಾಯಣ ಅವರು, ‘ಕಾಮಗಾರಿಗಾಗಿ ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಆದಾಗ್ಯೂ, ಕೋರ್ಟ್ ಅನುಮತಿ ಪಡೆದೇ ಮುಂದಿನ ಹೆಜ್ಜೆ ಇರಿಸಲಾಗುವುದು. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ–2014ರ ಕಲಂ 6ರ ಅನುಸಾರ ಬಫರ್‌ ಝೋನ್‌ ವ್ಯಾಪ್ತಿಯಲ್ಲಿ ಬರ ದಂತೆ ನೋಡಿಕೊಂಡು ಕಾಮಗಾರಿ ಮುಂದುವರಿಸುವ ಬಗ್ಗೆ ಪರಿಶೀಲಿಸಲಾಗುವುದು’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮಧ್ಯಂತರ ಅರ್ಜಿ ವಿಲೇವಾರಿ ಮಾಡಿ ಆದೇಶಿಸಿತು. ಅಂತೆಯೇ, ಸುಬ್ರಹ್ಮಣ್ಯ ಕೆರೆ ಪ್ರದೇಶದ ಒತ್ತುವರಿ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸುವಂತೆ ಸೂಚಿಸಿ ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT