ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿಯಲ್ಲಿ ಸರಗಳವು ಮಾಡಿ ಪರಾರಿ; ಉಡುಪಿಯಲ್ಲಿ ಸೆರೆಸಿಕ್ಕ ಆರೋಪಿಗಳು

Published 21 ಜುಲೈ 2023, 20:30 IST
Last Updated 21 ಜುಲೈ 2023, 20:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಮಹಿಳೆಯರ ಸರಗಳವು ಮಾಡಿ ಪರಾರಿಯಾಗಿ ಉಡುಪಿಯಲ್ಲಿ ಸೆರೆಸಿಕ್ಕಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದಿದ್ದು, ಇವರಿಂದ ₹ 3 ಲಕ್ಷ ಮೌಲ್ಯದ 49 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

‘ಮೊಹಮ್ಮದ್ ರಫೀಕ್ ಹಾಗೂ ತೌಫಿಕ್ ಸಾಧಿಕ್ ಬಂಧಿತರು. ಅಪರಾಧ ಹಿನ್ನೆಲೆಯುಳ್ಳ ಇವರಿಬ್ಬರು, ಬೆಂಗಳೂರು, ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಮಹಿಳೆಯರ ಸರಗಳವು ಮಾಡಿದ್ದರು. ಇತ್ತೀಚೆಗಷ್ಟೇ ಇವರನ್ನು ಉಡುಪಿ ಪೊಲೀಸರು ಬಂಧಿಸಿದ್ದರು. ಬಾಡಿ ವಾರಂಟ್‌ ಮೂಲಕ ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಕೆಲ ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮಲ್ಲೇಶ್ವರ ಠಾಣೆ ವ್ಯಾಪ್ತಿಯ ನಿವಾಸಿ ಶಾಂತಮ್ಮ (70) ಅವರು ಮೇ 27ರಂದು ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು, ಶಾಂತಮ್ಮ ಅವರನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತೊಯ್ದಿದ್ದರು. ಈ ಸಂಬಂಧ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿಗಳ ಸುಳಿವು ಸಿಕ್ಕಿತ್ತು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT