ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲೇಶ್ವರ ಮಾರುಕಟ್ಟೆ ಡಿಸೆಂಬರ್‌ಗೆ ಸಿದ್ಧ

Last Updated 19 ಫೆಬ್ರುವರಿ 2022, 20:44 IST
ಅಕ್ಷರ ಗಾತ್ರ

ಬೆಂಗಳೂರು: ‘ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಲ್ಲೇಶ್ವರದ ಹೂವು-ಹಣ್ಣು ಮಾರುಕಟ್ಟೆ ಸಂಕೀರ್ಣದ ಕಾಮಗಾರಿಗೆ ವೇಗ ನೀಡಲಾಗಿದ್ದು, ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಇದನ್ನು ಲೋಕಾರ್ಪಣೆ ಮಾಡಲಾಗುವುದು’ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ಕಟ್ಟಡ ಕಾಮಗಾರಿಯನ್ನು ಶನಿವಾರ ಪರಿಶೀಲಿಸಿದ ವಿಶ್ವನಾಥ್, ‘ಕಾಮಗಾರಿ ತುಂಬಾ ವಿಳಂಬವಾಗಿರುವುದರಿಂದ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಮತ್ತಷ್ಟು ವಿಳಂಬ ಮಾಡುವುದು ಬೇಡ’ ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಕಟ್ಟಡದ ಎರಡು ನೆಲಮಹಡಿಗಳಲ್ಲಿ ಸಾರ್ವಜನಿಕ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಮೊದಲ ಮಹಡಿಯಲ್ಲಿ ಹೂವು-ಹಣ್ಣು ವ್ಯಾಪಾರಿಗಳಿಗೆ 181 ಮಳಿಗೆಗಳು ಮತ್ತು 1 ರಿಂದ 4ನೇ ಮಹಡಿವರೆಗೆ ವಾಣಿಜ್ಯ ಸಂಕೀರ್ಣಗಳು ನಿರ್ಮಾಣವಾಗಲಿವೆ. ಐದನೇ ಮಹಡಿಯಲ್ಲಿ ಮತ್ತು ಟೆರೇಸ್‌ನಲ್ಲಿ ವಾಹನ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮೊದಲ ಮಹಡಿಯಿಂದ ನಾಲ್ಕನೇ ಮಹಡಿವರೆಗೆ ನಿರ್ಮಾಣವಾಗಲಿರುವ ಮಳಿಗೆಗಳು ಬಿಡಿಎಗೆ ಸೇರಿರುತ್ತವೆ. ಇವುಗಳನ್ನು ಬಾಡಿಗೆ ಅಥವಾ ಗುತ್ತಿಗೆ ಆಧಾರದಲ್ಲಿ ಮಾಲ್‌ಗಳಿಗೆ ಅಥವಾ ಇತರ ವಾಣಿಜ್ಯ ಚಟುವಟಿಕೆಗಳಿಗೆ ನೀಡಲಾಗುತ್ತದೆ. ಇದರಿಂದ ಬಿಡಿಎಗೆ ಆದಾಯ ಬರಲಿದೆ ಎಂದು ವಿವರಿಸಿದರು.

ಬಿಡಿಎ ಆಯುಕ್ತ ರಾಜೇಶ್ ಗೌಡ, ಎಂಜಿನಿಯರಿಂಗ್ ಸದಸ್ಯ ಶಾಂತರಾಜಣ್ಣ ಇದ್ದರು.

‘ಹಣಕಾಸಿನ ಕೊರತೆ ಇಲ್ಲ’: ‘ಮಾರುಕಟ್ಟೆ ನಿರ್ಮಾಣಕ್ಕೆ ಹಣಕಾಸಿನ ತೊಂದರೆ ಇಲ್ಲ. ನೇಮಿಸಿದ್ದ ಸಲಹೆಗಾರರಿಂದ ಯೋಜನೆಗೆ ಹಿನ್ನಡೆಯಾಗಿತ್ತು. ಹಾಗಾಗಿ ಸಲಹಾ ಸಂಸ್ಥೆಯನ್ನು ಬದಲಿಸಲು ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ’ ಎಂದು ವಿಶ್ವನಾಥ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT