ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀರೋಗ ತಜ್ಞೆ ಹೆಸರಿನಲ್ಲಿ ನಕಲಿ ಖಾತೆ: ಆರೋಪಿ ಬಂಧನ

Last Updated 21 ಅಕ್ಟೋಬರ್ 2022, 20:54 IST
ಅಕ್ಷರ ಗಾತ್ರ

ಬೆಂಗಳೂರು: ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋ‍ಪಿ, ದಾವಣಗೆರೆಯ ಜಗದೀಶ್ (32) ಎಂಬಾತನನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ದ್ವಿತೀಯ ಪಿಯುಗೆ ಶಿಕ್ಷಣ ಮೊಟಕುಗೊಳಿಸಿದ್ದು, ತನ್ನೂರಿನಲ್ಲೇ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಪದ್ಮಿನಿ ಪ್ರಸಾದ್ ಭಾವಚಿತ್ರ ಬಳಸಿ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದ. ಕೆಲ ಮಹಿಳೆಯರು ನೀಡಿದ್ದ ಮಾಹಿತಿ ಆಧರಿಸಿ ಪದ್ಮಿನಿ ಪ್ರಸಾದ್ ಅವರು ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪದ್ಮಿನಿ ಪ್ರಸಾದ್ ಅವರು ಲೈಂಗಿಕ ಆರೋಗ್ಯದ ಬಗ್ಗೆ ಜನರಿಗೆ ತಿಳಿವಳಿಕೆ ನೀಡುತ್ತಿದ್ದಾರೆ. ಹಲವರು ಸಾಮಾಜಿಕ ಮಾಧ್ಯಮಗಳ ಮೂಲಕ ಪದ್ಮಿನಿ ಅವರನ್ನು ಸಂಪರ್ಕಿಸಿ ಸಲಹೆ ಪಡೆಯುತ್ತಿದ್ದಾರೆ. ಇದನ್ನು ತಿಳಿದಿದ್ದ ಆರೋಪಿ, ಪದ್ಮಿನಿ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದಿದ್ದ.’

‘ಖಾತೆಗೆ ಸಂದೇಶ ಕಳುಹಿಸುತ್ತಿದ್ದ ಮಹಿಳೆಯರ ಸಮಸ್ಯೆಗಳಿಗೆ ಪದ್ಮಿನಿ ಅವರ ಸೋಗಿನಲ್ಲಿ ಪ್ರತಿಕ್ರಿಯಿಸುತ್ತಿದ್ದ ಆರೋಪಿ, ಅಶ್ಲೀಲ ಸಂದೇಶ ಹಾಗೂ ಚಿತ್ರಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT