ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ಪತಿಯು ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮೈಕೋ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಳೇಕಲ್ಲಳ್ಳಿ ನಿವಾಸಿ ರಂಗಮ್ಮ(46) ಕೊಲೆಯಾದ ಮಹಿಳೆ. ಕೃತ್ಯ ಎಸಗಿದ ಪತಿ ನಾಗರಾಜ್ (51) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಭಾನುವಾರ ಬಿಳೇಕಲ್ಲಳ್ಳಿಯ ಮನೆಯಲ್ಲಿ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ಹೇಳಿದರು.

ದಾವಣಗೆರೆಯ ರಂಗಮ್ಮ ಮತ್ತು ನಾಗರಾಜ್ ಕೆಲ ವರ್ಷಗಳಿಂದ ಬಿಳೇಕಲ್ಲಳ್ಳಿಯಲ್ಲಿ ಮಗನ ಜತೆ ವಾಸವಾಗಿದ್ದರು. ರಂಗಮ್ಮ ಮನೆಗೆಲಸ ಮಾಡುತ್ತಿದ್ದರು. ನಾಗರಾಜ್ ಖಾಸಗಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿ ಕೆಲಸ ಮಾಡಿಕೊಂಡಿದ್ದರು. ಮಗ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ.

‘ಆರೋಪಿಯು ಪತ್ನಿ ರಂಗಮ್ಮನ ಮೇಲೆ ಅನುಮಾನಗೊಂಡು, ಕುಡಿದು ಬಂದು ಮದ್ಯದ ಅಮಲಿನಲ್ಲಿ ನಿತ್ಯ ಜಗಳವಾಡುತ್ತಿದ್ದ. ಭಾನುವಾರ ರಾತ್ರಿ ಕುಡಿದು ಬಂದ ನಾಗರಾಜ್, ಪತ್ನಿ ಜತೆ ಗಲಾಟೆ ಮಾಡಿದ್ದಾನೆ. ಅದು ವಿಕೋಪಕ್ಕೆ ಹೋದಾಗ, ಅಡುಗೆ ಮನೆಗೆ ಹೋಗಿ ಚಾಕು ತೆಗೆದುಕೊಂಡು ಬಂದು ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಮನೆಯಲ್ಲಿ ಗಲಾಟೆ ಆಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಬಂದು ನೋಡಿದಾಗ ರಂಗಮ್ಮ ಕೊಲೆಯಾಗಿರುವುದು ಗೊತ್ತಾಗಿದೆ. ನಂತರ ರಂಗಮ್ಮ ಅವರ ಪುತ್ರ ಠಾಣೆಗೆ ವಿಷಯ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ರಂಗಮ್ಮನ ಪುತ್ರನಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡು ಆರೋಪಿ ನಾಗರಾಜ್ನನ್ನು ಬಂಧಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಸೋಮವಾರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.