ಭಾನುವಾರ, ನವೆಂಬರ್ 27, 2022
26 °C

ಬಹಿರ್ದೆಸೆಗೆ ಹೊರಟಿದ್ದವರ ಸುಲಿಗೆ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಹಿರ್ದೆಸೆಗೆ ಹೊರಟಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆರ್.ಕೆ. ಹೆಗಡೆ ನಗರದ ಹಬೀಬ್‌ ಉಲ್ಲಾ ಖಾನ್ (24) ಹಾಗೂ ನದೀಂ ಅಲಿಯಾಸ್ ನಿಗ್ರೊ (20) ಬಂಧಿತರು. ಇವರಿಂದ ಮೊಬೈಲ್‌ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ಆಗಸ್ಟ್ 4ರಂದು ಮಧ್ಯಾಹ್ನ ಶ್ರೀರಾಂಪುರ ರೈಲ್ವೆ ಗೇಟ್ ಬಳಿ ಬಹಿರ್ದೆಸೆಗೆ ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ಆರೋಪಿಗಳು, ಮಾರ್ಗಮಧ್ಯೆ ಅಡ್ಡಗಟ್ಟಿ ಜೀವ ಬೆದರಿಕೆಯೊಡ್ಡಿ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.’

‘ಸುಲಿಗೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಆರೋಪಿ ಹಬೀಬ್‌ ಮಾತ್ರ ಸಿಕ್ಕಿಬಿದ್ದ. ಇನ್ನೊಬ್ಬ ಆರೋಪಿ ನದೀಂನನ್ನು ಠಾಣೆಯೊಂದರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಹಬೀಬ್ ನೀಡಿದ್ದ ಮಾಹಿತಿ ಆಧರಿಸಿ ನದೀಂನನ್ನು ಬಾಡಿ ವಾರಂಟ್ ಮೇಲೆ ಬಂಧಿಸಲಾಯಿತು. ಇಬ್ಬರು ಆರೋಪಿಗಳು ಹಲವೆಡೆ ಸುಲಿಗೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು