ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಪ್ಪಲಿಯೊಳಗೆ ಚಿನ್ನ ಸಾಗಣೆ: ಬಂಧನ

Last Updated 15 ಮಾರ್ಚ್ 2023, 13:33 IST
ಅಕ್ಷರ ಗಾತ್ರ

ದೇವನಹಳ್ಳಿ: ಚಪ್ಪಲಿಯ ಒಳಭಾಗದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಆರೋಪಿಯನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

ಆತನಿಂದ ₹ 69.40 ಲಕ್ಷ ಮೌಲ್ಯದ 1 ಕೆ.ಜಿ 205 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಯಾಣಿಕನ ಪೂರ್ವ ಅಪರಾಧಿಕ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಕಸ್ಟಮ್ಸ್‌ ಅಧಿಕಾರಿಗಳು ತೀವ್ರ ತಪಾಸಣೆ ಮಾಡಿದಾಗ ಆತನ ಚಪ್ಪಲಿಯ ತಳಭಾಗದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಕಳ್ಳ ಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಯು ಸುಲಭವಾಗಿ ಅಧಿಕಾರಿಗಳ ಕಣ್ತಪ್ಪಿಸುವ ಉದ್ದೇಶದಿಂದ ಚಿನ್ನವನ್ನು ಸಣ್ಣ ಸಣ್ಣ ತುಂಡುಗಳನ್ನಾಗಿಸಿ ಮಾಡಿ ಚಪ್ಪಲಿಯಲ್ಲಿ ಇರಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT