ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಟ್ಟಡದಿಂದ ಸ್ನೇಹಿತನನ್ನು ತಳ್ಳಿ ಕೊಲೆ; ಆರೋಪಿ ವಶಕ್ಕೆ

Published 29 ಜೂನ್ 2024, 14:46 IST
Last Updated 29 ಜೂನ್ 2024, 14:46 IST
ಅಕ್ಷರ ಗಾತ್ರ

ಬೆಂಗಳೂರು: ಕಟ್ಟಡದಿಂದ ಸ್ನೇಹಿತನನ್ನು ತಳ್ಳಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶದ ವಿಮಲ್ ಯಾದವ್(26) ಕೊಲೆಯಾದ ವ್ಯಕ್ತಿ. ತಲಘಟ್ಟಪುರದ ಅಂಜನಾಪುರ ಲೇಔಟ್‌ನಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ಕೃತ್ಯ ಎಸಗಿದ ಆರೋಪದಡಿ ಅಭಿಷೇಕ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

‘ಉತ್ತರ ಪ್ರದೇಶದ ಇಬ್ಬರು ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಪೇಟಿಂಗ್ ಕೆಲಸ ಮಾಡುತ್ತಿದ್ದರು. ಅಂಜನಾಪುರ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಅದೇ ಕಟ್ಟಡದ 2ನೇ ಮಹಡಿಯಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಇಬ್ಬರು ಮದ್ಯ ಸೇವಿಸಿದ್ದು ಗಲಾಟೆ ಮಾಡಿಕೊಂಡಿದ್ಧಾರೆ. ಆಗ ವಿಮಲ್‌ ಅವರನ್ನು ಅಭಿಷೇಕ್ ಕೆಳಕ್ಕೆ ತಳ್ಳಿದರು’ ಎಂದು ಪೊಲೀಸರು ಹೇಳಿದರು.

‘ಕೆಳಗೆ ಬಿದ್ದ ವಿಮಲ್ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT