ಬೆಂಗಳೂರು: ನಗರದ ರೌಡಿಯೊಬ್ಬನ ಪತ್ನಿ ಜೊತೆ ಮಾತನಾಡುತ್ತಿದ್ದರೆಂಬ ಕಾರಣಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ಮಾಡಲಾಗಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳು ಯುವಕ ಚಿಕಿತ್ಸೆ ಪಡೆದುಕೊಂಡಿದ್ದು, ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿಲ್ಲವೆಂದು ಗೊತ್ತಾಗಿದೆ.

ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ರೌಡಿಯೊಬ್ಬನ ಪತ್ನಿ, ಫೇಸ್‌ಬುಕ್‌ನಲ್ಲಿ ಖಾತೆ ಹೊಂದಿದ್ದರು. ಮಂಡ್ಯದ ನಿವಾಸಿ ಎನ್ನಲಾದ ಯುವಕನ ಪರಿಚಯವಾಗಿತ್ತು. ನಂತರ, ಇಬ್ಬರೂ ಮಾತನಾಡಲಾರಂಭಿಸಿದ್ದರು. ಇತ್ತೀಚೆಗೆ ರೌಡಿ, ಜೈಲಿನಿಂದ ಬಿಡುಗಡೆ ಆಗಿದ್ದ. ಯುವಕನ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಆತನನ್ನು ಕೆಂಗೇರಿಗೆ ಕರೆಸಿಕೊಂಡು ಹಲ್ಲೆ ಮಾಡಿಸಿದ್ದಾನೆ ಎನ್ನಲಾಗಿದೆ.

ಪೊಲೀಸರು, ‘ವಿಡಿಯೊ ಹರಿದಾಡಿದ್ದು ಗೊತ್ತಾಗಿದೆ. ಯುವಕ ಯಾವುದೇ ದೂರು ನೀಡಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.