ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯ ಚಿನ್ನಾಭರಣ ಕಳವು

Published 26 ಅಕ್ಟೋಬರ್ 2023, 14:34 IST
Last Updated 26 ಅಕ್ಟೋಬರ್ 2023, 14:34 IST
ಅಕ್ಷರ ಗಾತ್ರ

ಬೆಂಗಳೂರು: ಸಕಲೇಶಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರ ಚಿನ್ನಾಭರಣ ಕಳ್ಳತನವಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ 42 ವರ್ಷದ ಮಹಿಳೆ ಕಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ದೂರುದಾರರು ಹೈದರಾಬಾದ್‌ನಲ್ಲಿರುವ ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹೋಗಲು ಅ. 3ರಂದು ಬೆಂಗಳೂರಿಗೆ ಬಂದಿದ್ದರು. ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಇಳಿದಿದ್ದ ಅವರು, ಹೈದರಾಬಾದ್ ಕಡೆ ಹೋಗುವ ಬಸ್‌ ಬಳಿ ಹೋಗಿದ್ದರು.’

‘ಬ್ಯಾಗ್‌ ಪರಿಶೀಲನೆ ನಡೆಸಿದಾಗ, ಚಿನ್ನಾಭರಣಗಳು ಇರಲಿಲ್ಲ. ಗಾಬರಿಗೊಂಡ ಅವರು ಠಾಣೆಗೆ ಬಂದು ದೂರು ನೀಡಿದ್ದಾರೆ. ಸಕಲೇಶಪುರದಿಂದ ಬೆಂಗಳೂರಿಗೆ ಬರುವ ಬಸ್‌ನಲ್ಲಿ ಜನ ಸಂದಣಿ ಇತ್ತು. ಇದೇ ಬಸ್‌ನಲ್ಲಿಯೇ ಯಾರೋ ಕಳ್ಳರು, ಚಿನ್ನಾಭರಣ ಕದ್ದಿರುವುದಾಗಿ ಆರೋಪಿಸುತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಚಿನ್ನದ ಸರಗಳು, ಉಂಗುರಗಳು ಸೇರಿದಂತೆ 67 ಗ್ರಾಂ ತೂಕದ ಚಿನ್ನಾಭರಣ ಕಳ್ಳತನವಾಗಿದೆ. ಇವುಗಳ ಮೌಲ್ಯ ₹ 3.20 ಲಕ್ಷ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT