ಶನಿವಾರ, ಅಕ್ಟೋಬರ್ 16, 2021
22 °C

ಚಾಕು ತೋರಿಸಿ ಲ್ಯಾಪ್‌ಟಾಪ್‌ ಕದಿಯುತ್ತಿದ್ದವನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುವವರನ್ನು ಅಡ್ಡಗಟ್ಟಿ ಲ್ಯಾಪ್‌ಟಾಪ್‌ ಹಾಗೂ ಟ್ಯಾಬ್‌ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. 

ಲಿಯಾಕತ್‌ (52) ಬಂಧಿತ ಆರೋಪಿ. ಈತನಿಂದ ₹9.60 ಲಕ್ಷ ಮೌಲ್ಯದ 8 ಲ್ಯಾಪ್‌ಟಾಪ್‌ ಹಾಗೂ ಒಂದು ಟ್ಯಾಬ್‌ ಜಪ್ತಿಮಾಡಲಾಗಿದೆ. 

‘ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಅಡ್ಡಗಟ್ಟಿ ಲ್ಯಾಪ್‌ಟಾಪ್‌ ಕಸಿದು ಪರಾರಿಯಾಗಿದ್ದ ಎಂದು ವಿಘ್ನೇಶ್ವರ ರೆಡ್ಡಿ ಎಂಬುವವರು ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ. ಆತ ಕಲಬುರಗಿಯ ಜಿಲಾನಾಬಾದ್‌ನ ಮದೀನಾ ಕಾಲೊನಿ ನಿವಾಸಿ’ ಎಂದು ಪೊಲೀಸರು ಹೇಳಿದ್ದಾರೆ.

‘ಆರೋಪಿಯು ಉಪ್ಪಾರಪೇಟೆ ಹಾಗೂ ಗಂಗಮ್ಮನಗುಡಿ ವ್ಯಾಪ್ತಿಯಲ್ಲಿ ಹಲವು ಲ್ಯಾಪ್‌ಟಾಪ್‌ ಹಾಗೂ ಟ್ಯಾಬ್‌ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ’ ಎಂದು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು