ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬನ್‌ ಪಾರ್ಕ್: ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ

Last Updated 14 ಜನವರಿ 2023, 20:08 IST
ಅಕ್ಷರ ಗಾತ್ರ

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ವಿದೇಶಿ ಮಹಿಳೆಯೊಬ್ಬರ ಎದುರು ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಈ ಕುರಿತು ಎಫ್‌ಐಆರ್ ದಾಖಲಾಗಿದೆ.

‘ಸ್ವೀಡನ್ ದೇಶದ 38 ವರ್ಷದ ಮಹಿಳೆ ಕೃತ್ಯದ ಬಗ್ಗೆ ದೂರು ನೀಡಿದ್ದಾರೆ. 50 ವರ್ಷದ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಮಹಿಳೆ ನಗರಕ್ಕೆ ಬಂದಿದ್ದರು. ಇದೇ ವೇಳೆ ಕಬ್ಬನ್ ಪಾರ್ಕ್‌ಗೆ ಜ. 8ರಂದು ಭೇಟಿ ನೀಡಿದ್ದರು. ಆಗ ಮಹಿಳೆ ಬಳಿ ಬಂದ ಆರೋಪಿ, ತಾನು ಧರಿಸಿದ್ದ ಪ್ಯಾಂಟ್‌ ಅರ್ಧ ಬಿಚ್ಚಿ ಅಂಗಾಂಗವನ್ನು ತೋರಿಸುತ್ತ ಅಸಭ್ಯವಾಗಿ ವರ್ತಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT