ಬೆಂಗಳೂರು: ಕೆಲಸಕ್ಕಿದ್ದ ಉದ್ಯಮಿಯ ಕಚೇರಿಯಲ್ಲಿ ಹಂತ ಹಂತವಾಗಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಯನಗರ ನಿವಾಸಿ ಅಶೋಕ್ ಪಾರಸ್ರಾಮಪುರಿಯಾ ಅವರ ದೂರಿನ ಮೇರೆಗೆ ವ್ಯವಸ್ಥಾಪಕ ಕಾರ್ತಿಕ್ ಎಂಬಾತನನ್ನು ಬಂಧಿಸಿ, ₹89.09 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಗ್ರಾನೈಟ್ ಉದ್ಯಮಿ ಅಶೋಕ್ ಅವರ ಕಚೇರಿಯಲ್ಲಿ 20 ವರ್ಷಗಳಿಂದ ವ್ಯವಸ್ಥಾಪಕನಾಗಿರುವ ಕಾರ್ತಿಕ್ ಸಾಲ ಮಾಡಿದ್ದ. ಅದನ್ನು ತೀರಿಸಲು ಕಳ್ಳತನ ಮಾಡಲು ಸಂಚು ರೂಪಿಸಿ 8 ವರ್ಷಗಳ ಹಿಂದೆಯೇ ಕಚೇರಿಯ ಕಬೋರ್ಡ್ ನಕಲಿ ಕೀಯನ್ನು ಸಿದ್ಧಪಡಿಸಿಟ್ಟುಕೊಂಡಿದ್ದ. ಆ ಕೀ ಬಳಸಿ ಮಾಲೀಕರು ಇಲ್ಲದ ವೇಳೆ ಸ್ವಲ್ಪ ಸ್ವಲ್ಪವೇ ಚಿನ್ನಾಭರಣ, ಬೆಳ್ಳಿ, ನಗದನ್ನು ದೋಚುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಕಾರ್ತಿಕ್ ಬಗ್ಗೆ ಅನುಮಾನಗೊಂಡ ಮಾಲೀಕರು, ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಜುಲೈ 28ರಂದು ನಕಲಿ ಕೀ ಹಾಗೂ ನಗದು ಸಮೇತ ಕಾರ್ತಿಕ್ನನ್ನು ಆತನ ಮನೆಯಲ್ಲೇ ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದಾಗ ಸಾಲ ತೀರಿಸಲು ಕಳ್ಳತನ ಎಸಗಿರುವುದಾಗಿ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕದ್ದ ಚಿನ್ನದ ಪೈಕಿ ತ್ಯಾಗರಾಜನಗರದ ಜ್ಯುವೆಲ್ಲರಿ ಅಂಗಡಿ ಹಾಗೂ ಫೈನಾನ್ಸ್ ಕಂಪನಿಯಲ್ಲಿ ಅಡವಿಟ್ಟು ಹಣ ಪಡೆದುಕೊಂಡಿದ್ದ. ಸದ್ಯ ಅವುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿ ಕಾರ್ತಿಕ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕುಟುಂಬ ನಿರ್ವಹಣೆ, ವಿಲಾಸಿ ಜೀವನ ಹಾಗೂ ಜೂಜಿಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಸಾಲಗಾರರ ಒತ್ತಡ ಹೆಚ್ಚಾಗಿತ್ತು. ಹೀಗಾಗಿ ಆರೋಪಿ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿ, ಚಿನ್ನಾಭರಣ ಮಾರಾಟ, ಅಡಮಾನ ಇರಿಸಿ ಬೆಳ್ಳಿ ವಸ್ತುಗಳ ಖರೀದಿ ಜತೆಗೆ, ಸಾಲ ತೀರಿಸಿದ್ದಾನೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.