ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ | ಸೀತಾ–ರಾಮ ದೇವಾಲಯದಲ್ಲಿ ಮಂಡಲಪೂಜೆ

Published 19 ಮಾರ್ಚ್ 2024, 15:46 IST
Last Updated 19 ಮಾರ್ಚ್ 2024, 15:46 IST
ಅಕ್ಷರ ಗಾತ್ರ

ಯಲಹಂಕ: ಮೈಲಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮಣ, ಆಂಜನೇಯಸ್ವಾಮಿ ಸಮೇತ ಸೀತಾ–ರಾಮ ದೇವಾಲಯದಲ್ಲಿ ಆಯೋಜಿಸಿದ್ದ 48ನೇ ದಿನದ ಮಂಡಲಪೂಜೆ ವಿಧಿ–ವಿಧಾನಗಳು ವಿಜೃಂಭಣೆಯಿಂದ ನೆರವೇರಿದವು.

ಬೆಳಿಗ್ಗೆಯಿಂದಲೇ ಹೋಮ–ಹವನ, ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಸೇರಿ ವಿವಿಧ ಪೂಜಾಕೈಂಕರ್ಯಗಳನ್ನು ನೆರವೇರಿಸಲಾಯಿತು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಶಾಸಕ ಎಸ್‌.ಆರ್‌.ವಿಶ್ವನಾಥ್‌, ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮರಾವತಮ್ಮ, ಸದಸ್ಯರಾದ ಎನ್‌.ಹರೀಶ್‌, ಶೋಭಾ ಗೋಪಾಲ್‌, ಚೈತ್ರ ಕೆಂಪೇಗೌಡ, ಮಾಜಿ ಸದಸ್ಯರಾದ ಅಶೋಕ್‌, ರಾಮಚಂದ್ರಪ್ಪ, ಗ್ರಾಮದ ಮುಖಂಡರಾದ ನಾರಾಯಣಪ್ಪ, ಗಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT