ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಬ್ ಸ್ಫೋಟ: ಮತ್ತೊಬ್ಬ ಡೆಲಿವರಿ ಬಾಯ್ ವಶಕ್ಕೆ

Last Updated 22 ನವೆಂಬರ್ 2022, 21:39 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೊತೆ ಒಡನಾಟ ಹೊಂದಿದ್ದ ಆರೋಪದಡಿ ಡೆಲಿವರಿ ಬಾಯ್‌ ರೊಹುಲ್ಲಾ ಎಂಬಾತನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಮೈಸೂರಿನ ನಿವಾಸಿ ರೊಹುಲ್ಲಾ, ಬೆಂಗಳೂರಿನ ಕೆ.ಜಿ.ಹಳ್ಳಿಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಭಾನುವಾರ ಬಂದಿದ್ದ. ಮಂಗಳೂರು ಪೊಲೀಸರು ನೀಡಿದ್ದ ಮಾಹಿತಿಯಂತೆ ಈತನನ್ನು ವಶಕ್ಕೆ ಪಡೆಯಲಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ರೊಹುಲ್ಲಾನನ್ನು ಸುಪರ್ದಿಗೆ ಪಡೆದಿದ್ದ ಮೈಸೂರು ಪೊಲೀಸರು, ಆತನ ಮನೆಗೆ ಕರೆದೊಯ್ದು ಪರಿಶೀಲನೆ ನಡೆಸಿದ್ದರು. ಇದಾದ ನಂತರ, ಮಂಗಳೂರು ಪೊಲೀಸರು ರೊಹುಲ್ಲಾನನ್ನು ವಶಕ್ಕೆ ಪಡೆದು ತಮ್ಮೂರಿಗೆ ಕರೆದೊಯ್ದಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

‘ಸ್ಫೋಟ ಪ್ರಕರಣದ ಆರೋಪಿ ಜೊತೆಯಲ್ಲೇ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ರೊಹುಲ್ಲಾ, ಆತನ ಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನವಿದೆ. ವಿಚಾರಣೆಯಿಂದ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT