ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಮಾಂಗಲ್ಯ ಸರ ಕಸಿದು ಪರಾರಿ: ಇಬ್ಬರ ಸೆರೆ

Published 28 ಜೂನ್ 2024, 15:26 IST
Last Updated 28 ಜೂನ್ 2024, 15:26 IST
ಅಕ್ಷರ ಗಾತ್ರ

ಬೆಂಗಳೂರು: ಪಿಳ್ಳಗಾನಹಳ್ಳಿಯಲ್ಲಿ ಗೃಹಿಣಿಯೊಬ್ಬರ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿ ಆಗಿದ್ದ ಇಬ್ಬರು ಆರೋಪಿಗಳನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಸಿದ್ದಾಪುರದ ಸೋಮೇಶ್ವರ ಬಡಾವಣೆಯ ನಿವಾಸಿಗಳಾದ ಅಯೂಬ್‌ ಹಾಗೂ ಮೋಹಿದ್ ಬಂಧಿತ ಆರೋಪಿಗಳು.

‘ಬಂಧಿತರಿಂದ 8 ಗ್ರಾಂ ತೂಕದ ಚಿನ್ನದ ಮಾಂಗಲ್ಯ, ಎರಡು ಚಿನ್ನದ ಕಾಸು ಹಾಗೂ ಎರಡು ಚಿನ್ನದ ಗುಂಡುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಜೂನ್‌ 22ರಂದು ಗೃಹಿಣಿಯೊಬ್ಬರು ಅಂಜನಾಪುರ ಲಾಲ್‌ ಬಹೂದ್ದೂರ್‌ ಶಾಸ್ತ್ರಿ ನಗರದ 11ನೇ ಬ್ಲಾಕ್‌ನ ರಸ್ತೆಯಲ್ಲಿ ನಡೆದು ತೆರಳುತ್ತಿದ್ದರು. ಬೈಕ್‌ನಲ್ಲಿ ಬಂದ ಆರೋಪಿಗಳಿಬ್ಬರು ಕುತ್ತಿಗೆಗೆ ಕೈಹಾಕಿ ಮಾಂಗಲ್ಯ ಸರವನ್ನು ಕಸಿದು ಪರಾರಿ ಆಗಿದ್ದರು. ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು. ಸಿಸಿ ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು

‘ಜಯನಗರದ ಸೋಮೇಶ್ವರ ದೇವಸ್ಥಾನ ಆರ್ಚ್‌ ಬಳಿ ಜೂನ್‌ 26ರಂದು ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಟ ನಡೆಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಕೃತ್ಯ ನಡೆಸಿದ್ದ ಬಗ್ಗೆ ಬಾಯ್ಬಿಟ್ಟರು. ಕೃತ್ಯಕ್ಕೆ ಬಳಸಿದ ಬೈಕ್ ಅನ್ನೂ ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT