ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಮಾವು–ಹಲಸು ಮಾರಾಟ ಮೇಳಕ್ಕೆ ಚಾಲನೆ

Published 22 ಮೇ 2024, 0:30 IST
Last Updated 22 ಮೇ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ (ಹಾಪ್‌ಕಾಪ್ಸ್‌) ವತಿಯಿಂದ ‘ಮಾವು ಹಾಗೂ ಹಲಸು ಮಾರಾಟ ಮೇಳ’ಕ್ಕೆ ನಗರದ ಹಡ್ಸನ್‌ ವೃತ್ತದ ಮಾರಾಟ ಮಳಿಗೆಯಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

ಹಾಪ್‌ಕಾಮ್ಸ್‌ನಲ್ಲಿ ಮಾರಾಟವಾಗುವ ಮಾವಿನ ಹಣ್ಣನ್ನು ನೈಸರ್ಗಿಕವಾಗಿ ಮಾಗಿಸಲಾಗುತ್ತದೆ. ರಾಸಾಯನಿಕ ಮುಕ್ತ ಮಾವಿನ ಹಣ್ಣನ್ನು ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಮೇಳವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತಿದೆ. ಹಾಪ್‌ಕಾಮ್ಸ್‌ನ ಎಲ್ಲಾ ಮಾರಾಟ ಮಳಿಗೆಗಳಲ್ಲಿ ಮೇಳ ಆರಂಭವಾಗಿದೆ. 

ನಮ್ಮ ಸಂಸ್ಥೆಯು 500 ಟನ್‌ ಮಾವು 100 ಟನ್‌ ಹಲಸಿನ ವಹಿವಾಟು ನಡೆಸುವ ಗುರಿ ಹೊಂದಿದೆ. ಮೇಳವು ಇದೇ 21ರಿಂದ 31ರವರೆಗೆ ನಡೆಯಲಿದ್ದು, ಎಲ್ಲಾ ತಳಿಯ ಮಾವಿನ ಮತ್ತು ಹಲಸಿನ ಹಣ್ಣುಗಳನ್ನು ಶೇ 5 ರಿಂದ 10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ’ ಎಂದು ಹಾಪ್‌ಕಾಮ್ಸ್ ಅಧ್ಯಕ್ಷ ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದರು.

‘ರಾಜ್ಯದಲ್ಲಿ  1.49 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಾಜ್ಯದಲ್ಲಿ ಪ್ರಮುಖವಾಗಿ ಬಾದಾಮಿ, ಸೆಂಧೂರ, ನೀಲಂ, ತೋತಾಪುರಿ, ಮಲ್ಲಿಕಾ, ರಸಪುರಿ ತಳಿಗಳನ್ನು ಬೆಳೆಯಲಾಗುತ್ತದೆ’ ಎಂದು ತೋಟಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಪರಮಶಿವಮೂರ್ತಿ ತಿಳಿಸಿದರು.

‘ಹಲಸು ಕೂಡ ಒಂದು ಪ್ರಮುಖ ತೋಟಗಾರಿಕೆ ಬೆಳೆಯಾಗಿದ್ದು, ರಾಜ್ಯದಲ್ಲಿ ಒಟ್ಟು 1,209 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಪ್ರಮುಖವಾಗಿ ತುಮಕೂರು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಹಲಸಿನ ಹಣ್ಣಿನ ಬೆಳೆಯಿದೆ. ಒಟ್ಟು 46,478 ಮೆಟ್ರಿಕ್‌ ಟನ್‌ ಉತ್ಪಾದನೆಯಾಗುತ್ತದೆ’ ಎಂದು ಮಾಹಿತಿ ನೀಡಿದರು.

ಮಾವಿನ ಹಣ್ಣಿನ ಬೆಲೆ ತಳಿ; ಮೇಳದ ದರ (ಒಂದು ಕೆ.ಜಿ.ಗೆ ₹ ಗಳಲ್ಲಿ) ತೋತಾಪುರಿ;54 ಬಾದಾಮಿ;140 ಬಾದಾಮಿ (ಆಲ್ಫಾನ್ಸೊ 3 ಕೆ.ಜಿ ಬಾಕ್ಸ್‌ಗೆ);480 ರಸಪೂರಿ;108 ಸೆಂದೂರ; 70 ಬೈಗನ್‌ಪಲ್ಲಿ;99 ಮಲ್ಲಿಕಾ;140 ದಶೇರಿ;140 ಕೇಸರ್;140 ಮಲಗೋವ;225 ಕಾಲಪಾಡು;162 ಇಮಾಮ್‌ ಪಸಂದ್‌;256 –– ಹಲಸಿನ ಹಣ್ಣು; ₹ 32 (ಪ್ರತಿ ಕೆ.ಜಿ.ಗೆ) 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT