ಭಾನುವಾರ, ಏಪ್ರಿಲ್ 11, 2021
32 °C

ಡಯಾಲಿಸಿಸ್ ರೋಗಿಗಳಿಗೆ ಉಚಿತ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಮಣಿಪಾಲ್ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಗೆ ಒಳಗಾಗಿರುವ ರೋಗಿಗಳಿಗೆ ಗುರುವಾರ ವಿಶ್ವ ಕಿಡ್ನಿ ದಿನದ ಅಂಗವಾಗಿ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಯಿತು.

ಮಣಿಪಾಲ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಯಾಲಿಸಿಸ್‌ ರೋಗಿಗಳಿಗೆ ಮಾತ್ರ ಈ ಸೌಲಭ್ಯ ಇದೆ. ಹಳೇ ವಿಮಾನ ನಿಲ್ದಾಣ ರಸ್ತೆ, ವೈಟ್‌ಫೀಲ್ಡ್‌್ ಮತ್ತು ಮಲ್ಲೇಶ್ವರದ ಮಣಿಪಾಲ್ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ.

‘ಕೋವಿಡ್ ಕಾರಣ ಡಯಾಲಿಸಿಸ್ ರೋಗಿಗಳು ಸೋಂಕು ತಗುಲುವ ಆತಂಕದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡು ಉಚಿತ ಲಸಿಕೆ ನೀಡಲಾಗುತ್ತಿದೆ. ನಮ್ಮ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಗೆ ಒಳಗಾಗಿರುವ ಎಲ್ಲ ರೋಗಿಗಳಿಗೂ ಈ ಸೇವೆ ನೀಡುತ್ತೇವೆ’ ಎಂದು ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ. ಸುದರ್ಶನ್ ಬಲ್ಲಾಳ್ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.