ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಹಾಸ್ಟೆಲ್‌ನಲ್ಲಿ ಇಲಿ ಔಷಧ ಸಿಂಪಡಣೆ; 19 ವಿದ್ಯಾರ್ಥಿಗಳು ಅಸ್ವಸ್ಥ

Published 19 ಆಗಸ್ಟ್ 2024, 5:04 IST
Last Updated 19 ಆಗಸ್ಟ್ 2024, 5:04 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಆದರ್ಶ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಇಲಿ ಔಷಧ ಸಿಂಪಡಣೆಯಿಂದಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು 19 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ವಿದ್ಯಾರ್ಥಿಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 19 ವಿದ್ಯಾರ್ಥಿಗಳ ಪೈಕಿ ಮೂವರು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಉಳಿದವರು ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಇಲಿ ಔಷಧ ಸಿಂಪಡಣೆ ಮಾಡಿದ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 286 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT