ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 15ರಿಂದ ನಗರದಲ್ಲಿ ಆರ್‌ಎಸ್‌ಎಸ್‌ ಅಧಿವೇಶನ

Last Updated 29 ಫೆಬ್ರುವರಿ 2020, 8:25 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ಅಧಿವೇಶನ ಅಖಿಲ ಭಾರತೀಯ ಪ್ರತಿನಿಧಿ ಸಭಾ ಮಾರ್ಚ್‌ 15 ರಿಂದ 17 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ನಗರದಲ್ಲಿ ಐದನೇ ಬಾರಿಗೆ ಈ ಅಧಿವೇಶನ ನಡೆಯುತ್ತಿದೆ.

ಮಾಗಡಿ ರಸ್ತೆಯಲ್ಲಿರುವ ಜನಸೇವಾ ವಿದ್ಯಾ ಕೇಂದ್ರದ ಆವರಣದಲ್ಲಿ ಈ ಅಧಿವೇಶನ ನಡೆಯಲಿದ್ದು, ಆರ್‌ಎಸ್‌ಎಸ್‌ನ ಸರ ಸಂಘಚಾಲಕ ಡಾ.ಮೋಹನ್‌ ಭಾಗವತ್‌, ಸರಕಾರ್ಯವಾಹ ಸುರೇಶ್‌ ಜೋಷಿ ಸಭೆಯ ಕಾರ್ಯಕಲಾಪ ನಡೆಸುತ್ತಾರೆ.

ಪ್ರತಿನಿಧಿ ಸಭಾ ಅಧಿವೇಶನವು ಆರ್‌ಎಸ್‌ಎಸ್‌ನ ವಾರ್ಷಿಕ ಕಾರ್ಯಕ್ರಮವಾಗಿದ್ದು, ಸಂಘದ ಅತ್ಯುನ್ನತ ಸಭೆ ಇದಾಗಿದೆ. ಈ ಸಭೆಯಲ್ಲಿ ಸಂಘ ಪರಿವಾರದ ವಿವಿಧ ಸಂಘಟನೆಗಳ ರಾಷ್ಟ್ರೀಯ ಪ್ರಮುಖರು ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್‌, ವನವಾಸಿ ಕಲ್ಯಾಣ ಆಶ್ರಮ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌, ಕಿಸಾನ್‌ ಸಂಘ, ರಾಷ್ಟ್ರ ಸೇವಿಕಾ ಸಮಿತಿ ಮೊದಲಾದ 35 ಕ್ಕೂ ಹೆಚ್ಚು ಸಂಘಟನೆಗಳ 1,400 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ವಿವಿಧ ಸಂಘಟನೆಗಳ ವಾರ್ಷಿಕ ವರದಿ, ಸಂಘಟನೆಯ ವಿಸ್ತಾರ, ಹೊಸ ಆಯಾಮಗಳು, ಮುಂಬರುವ ವರ್ಷದ ಯೋಜನೆ ಚರ್ಚೆಯಾಗಲಿದೆ. ರಾಷ್ಟ್ರದ ಮಹತ್ವದ ವಿಷಯಗಳ ಬಗ್ಗೆ ಕೆಲವು ನಿರ್ಣಯಗಳನ್ನೂ ತೆಗೆದುಕೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT