ಶನಿವಾರ, ಸೆಪ್ಟೆಂಬರ್ 25, 2021
29 °C

ತ್ರಿಪುರ, ಬಿಹಾರದಿಂದ ಗಾಂಜಾ ತಂದು ಮಾರಾಟ; ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತ್ರಿಪುರ ಹಾಗೂ ಬಿಹಾರದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

‘ಎಚ್‌ಆರ್‌ಬಿಆರ್ ಬಡಾವಣೆಯ 1ನೇ ಹಂತದ ಬಾಬುಸಾಪಾಳ್ಯ ಜಂಕ್ಷನ್ ಬಳಿ ಗಾಂಜಾ ಮಾರಲು ಆರೋಪಿಗಳು ಬಂದಿದ್ದರು. ಎರಡು ಬ್ಯಾಗ್‌ಗಳಲ್ಲಿ ಗಾಂಜಾ ಪೊಟ್ಟಣಗಳನ್ನು ತುಂಬಿಕೊಂಡು ತಂದಿದ್ದರು. ಅವರ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಯಿತು. ₹ 6.50 ಲಕ್ಷ ಮೌಲ್ಯದ 21 ಕೆ.ಜಿ 500 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಯೊಬ್ಬ ತ್ರಿಪುರ ರಾಜ್ಯದವ. ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ಇನ್ನೊಬ್ಬ ಆರೋಪಿ ಪರಿಚಯವಾಗಿತ್ತು. ಇಬ್ಬರೂ ಸೇರಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದರು. ತ್ರಿಪುರ ಹಾಗೂ ಬಿಹಾರದ ಕೆಲವರ ಜೊತೆ ಒಡನಾಟ ಹೊಂದಿದ್ದ ಆರೋಪಿಗಳು, ಅವರ ಮೂಲಕ ಗಾಂಜಾ ಖರೀದಿಸಿ ನಗರಕ್ಕೆ ತರುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು, ಕೆಲ ಕಾರ್ಮಿಕರಿಗೆ ಮಾರುತ್ತಿದ್ದರು.’

‘ಗಾಂಜಾ ಮಾರಾಟದಿಂದ ಬಂದ ಹಣವನ್ನು ಆರೋಪಿಗಳು ಹಂಚಿಕೊಳ್ಳುತ್ತಿದ್ದರು. ಇವರ ಜೊತೆ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಮಾಹಿತಿ ಇದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು