ಶುಕ್ರವಾರ, ಜುಲೈ 23, 2021
23 °C

ಮೀನಿನ ಬಾಕ್ಸ್‌ನಲ್ಲಿ ಗಾಂಜಾ ಸಾಗಾಟ: ಮೂವರು ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೀನಿನ ಬಾಕ್ಸ್‌ಗಳಲ್ಲಿ ಗಾಂಜಾ ಸಾಗಾಟ ಹಾಗೂ ಮಾರುತ್ತಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. 

ಒಡಿಶಾದ ದಿವಾಕರ್, ಬೆಂಗಳೂರಿನ ಸುದರ್ಶನ್ ಹಾಗೂ ವಿಶ್ವನಾಥ್ ಬಂಧಿತ ಆರೋಪಿಗಳು.

‘ಒಡಿಶಾದ ಕೆಲ ಭಾಗಗಳಲ್ಲಿ ಬೆಳೆಯುವ ಗಾಂಜಾವನ್ನು ದಿವಾಕರ್‌ ಬೆಂಗಳೂರಿಗೆ ಪೂರೈಕೆ ಮಾಡುತ್ತಿದ್ದ. ಅವುಗಳನ್ನು ಲಾರಿ, ಬಸ್ಸು ಹಾಗೂ ರೈಲಿನಲ್ಲಿ ಬೆಂಗಳೂರಿಗೆ ತರಲಾಗುತ್ತಿತ್ತು. ಬಳಿಕ ಸುದರ್ಶನ್ ಮುಖಾಂತರವಾಗಿ ವಿಶ್ವನಾಥ್‌ ಗಾಂಜಾ ಮಾರಾಟ ಮಾಡಿ, ಹಣ ಸಂಪಾದಿಸುತ್ತಿದ್ದ’ ಎಂದು ಪೊಲೀಸರು ತಿಳಿಸಿದರು. 

‘ಇವರು ನಗರದ ಪ್ರತಿಷ್ಠಿತ ಕಾಲೇಜುಗಳು, ಕಾರ್ಖಾನೆಗಳು ಹಾಗೂ ಡಾಬಾಗಳ ಬಳಿ ತೆರಳಿ, ಗಿರಾಕಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಮೇರೆಗೆ ನಡೆಸಿದ ದಾಳಿಯ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 11 ಕೆ.ಜಿ ಗಾಂಜಾ ಜಪ್ತಿ ಮಾಡಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು