ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುಕಟ್ಟೆಗಳಲ್ಲಿ ವ್ಯಾಪಾರಕ್ಕೆ ಸಿದ್ಧತೆ

Last Updated 30 ಆಗಸ್ಟ್ 2020, 19:26 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕೆ.ಆರ್.ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ತರಕಾರಿ ಸಗಟು ಮಾರುಕಟ್ಟೆಗಳು ಸೆ.1ರಿಂದ ಪುನರಾರಂಭಗೊಳ್ಳಲು ಸಜ್ಜಾಗಿವೆ. ವ್ಯಾಪಾರಿಗಳು ಹಾಗೂ ರೈತರ ಮನವಿಗೆ ಸ್ಪಂದಿಸಿದ ಪಾಲಿಕೆ, ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ವ್ಯಾಪಾರ ನಡೆಸಲು ಅನುಮತಿ ನೀಡಿದೆ.

ಕೊರೊನಾ ಸೋಂಕು ಹೆಚ್ಚಾದ ಕಾರಣ ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‍ಡೌನ್ ಮಾಡಲಾಗಿತ್ತು. ಈಗ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿರುವುದರಿಂದ ಕೆ.ಆರ್.ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆ ಪ್ರಾಂಗಣದ ಮಳಿಗೆಗಳಲ್ಲಿ ವರ್ತಕರು ಭಾನುವಾರದಿಂದಲೇ ಸಿದ್ಧತೆ ಮಾಡಿಕೊಂಡರು.

ಮಾರುಕಟ್ಟೆಗಳಲ್ಲಿ ಸುರಕ್ಷಿತ ವ್ಯಾಪಾರಕ್ಕಾಗಿ ಮಳಿಗೆಗಳ ಬಳಿ ಮಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ಸ್ವಚ್ಛತೆ ಬಗ್ಗೆ ನಿಗಾ ವಹಿಸಲು ಮಾರ್ಷಲ್‍ಗಳನ್ನು ನೇಮಿಸಲಾಗಿದೆ.

ಇಂದು ಪೂಜೆ: ’ಪಾಲಿಕೆ ವತಿಯಿಂದ ಕಲಾಸಿಪಾಳ್ಯ ಮಾರುಕಟ್ಟೆ ಪ್ರಾಂಗಣದ ಸ್ಯಾನಿಟೈಸ್ ನಡೆಯಲಿದೆ. ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಆ.31ರ ಬೆಳಿಗ್ಗೆ 9.30ಕ್ಕೆ ಮಾರುಕಟ್ಟೆಯ ಪ್ರವೇಶದ್ವಾರಕ್ಕೆ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಸೋಮವಾರ ರಾತ್ರಿಯಿಂದಲೇ ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭಗೊಳ್ಳಲಿದೆ' ಎಂದು ಕಲಾಸಿಪಾಳ್ಯ ತರಕಾರಿ ಸಗಟು ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷ ಆರ್.ವಿ.ಗೋಪಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT