ಬುಧವಾರ, ಜನವರಿ 20, 2021
27 °C

ಅಂಕ ತಿದ್ದಿದ ಹಗರಣ: ತನಿಖೆಗೆ ದೊರೆಸ್ವಾಮಿ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 804 ಉತ್ತರ ಪತ್ರಿಕೆಗಳ ಅಂಕಗಳನ್ನು ತಿದ್ದಿರುವ ಹಗರಣವನ್ನು ಖಂಡಿಸಿರುವ ಸರ್ಕಾರದ ಶೈಕ್ಷಣಿಕ ಸಲಹೆಗಾರ ಡಾ. ಎಂ.ಆರ್. ದೊರೆಸ್ವಾಮಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಪ್ರಜಾವಾಣಿ'ಯಲ್ಲಿ ಜ.5ರಂದು ‘804 ಉತ್ತರಪತ್ರಿಕೆಗಳ ಅಂಕ ತಿದ್ದಿದರು’ ಶೀರ್ಷಿಕೆಯಡಿ ಪ್ರಕಟವಾದ ವರದಿ ನೋಡಿ ಪ್ರತಿಕ್ರಿಯಿಸಿರುವ ಅವರು, ‘ಶೈಕ್ಷಣಿಕ ಚಟುವಟಿಕೆಗಳನ್ನು ದಕ್ಷತೆಯಿಂದ, ಉತ್ತಮವಾಗಿ ವಿಶ್ವವಿದ್ಯಾಲಯಗಳು ನಿರ್ವಹಿಸಬೇಕು ಎಂದು ಸಮಾಜ ಬಯಸುತ್ತದೆ. ವಿಶ್ವವಿದ್ಯಾಲಯದಲ್ಲಿಯೇ ಇಂತಹ ಹಗರಣಗಳು ನಡೆಯುತ್ತಿವೆ. ಸ್ಕ್ಯಾನಿಂಗ್ ಏಜೆನ್ಸಿ, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ಸಿಬ್ಬಂದಿಯೇ ಈ ಅಕ್ರಮ ನಡೆಸಿರುವುದು ದುರದೃಷ್ಟಕರ’ ಎಂದು ಬೇಸರ ವ್ಯಕ್ತಪಡಿಸಿದರು.

‘ವಿಶ್ವವಿದ್ಯಾಲಯಗಳಲ್ಲಿನ ಪರೀಕ್ಷಾ ವ್ಯವಸ್ಥೆಯನ್ನೇ ಪುನರ್‌ ರೂಪಿಸಬೇಕಾದ ಅಗತ್ಯವನ್ನು ಈ ಹಗರಣ ಎತ್ತಿ ತೋರಿಸಿದೆ. ಹೊರಗುತ್ತಿಗೆ ಏಜೆನ್ಸಿಗಳು, ತಪ್ಪು ಮಾಡಿರುವ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಬೇಕು’ ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು