ಮಂಗಳವಾರ, ಜುಲೈ 27, 2021
27 °C

ಬೆಂಗಳೂರು: ₹ 2.07 ಲಕ್ಷ ವಂಚಿಸಿದ ಆನ್‌ಲೈನ್ ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈವಾಹಿಕ ಜಾಲತಾಣ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ನಗರದ ಯುವತಿಯಿಂದ ₹ 2.07 ಲಕ್ಷ ಪಡೆದು ವಂಚಿಸಿದ್ದಾನೆ.

ನಗರದ ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿ ಆಗಿರುವ 30 ವರ್ಷದ ಯುವತಿ ವಂಚನೆ ಬಗ್ಗೆ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

‘ವರನಿಗಾಗಿ ಹುಡುಕಾಟ ನಡೆಸುತ್ತಿದ್ದ ಯುವತಿ, ಬೆಂಗಾಲಿ ಶಾದಿ ಡಾಟ್ ಕಾಮ್‌ ಜಾಲತಾಣದಲ್ಲಿ ಖಾತೆ ತೆರೆದಿದ್ದರು. ಅಲ್ಲಿ ಆರೋಪಿ ಪರಿಚಯವಾಗಿತ್ತು. ವಿದೇಶದಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿದ್ದ ಆರೋಪಿ, ಚಾಟಿಂಗ್ ಮಾಡಲಾರಂಭಿಸಿದ್ದ. ಮದುವೆಯಾಗುವುದಾಗಿ ಹೇಳಿದ್ದ’ ಎಂದು ಮೂಲಗಳು ಹೇಳಿವೆ.

‘ಇತ್ತೀಚೆಗೆ ಯುವತಿಗೆ ಕರೆ ಮಾಡಿದ್ದ ಆರೋಪಿ, ‘ನನ್ನ ವೈಯಕ್ತಿಕ ಹಾಗೂ ಶೈಕ್ಷಣಿಕ ದಾಖಲೆಗಳು ದೆಹಲಿ ವಿಮಾನ ನಿಲ್ದಾಣದಲ್ಲಿವೆ. ನಾನು ದೆಹಲಿಗೆ ಬರಲು ಆಗುವುದಿಲ್ಲ. ನೀವೇ ಅವುಗಳನ್ನು ನಿಮ್ಮ ವಿಳಾಸಕ್ಕೆ ತರಿಸಿಕೊಂಡು ಇಟ್ಟುಕೊಳ್ಳಿ. ನಾನು ಬಂದಾಗ ತೆಗೆದುಕೊಂಡು ಹೋಗುತ್ತೇನೆ’ ಎಂದಿದ್ದ.’

‘ಕೆಲ ನಿಮಿಷಗಳ ನಂತರ ವಿಮಾನ ನಿಲ್ದಾಣ ಅಧಿಕಾರಿ ಸೋಗಿನಲ್ಲಿ ಯುವತಿಗೆ ಕರೆ ಮಾಡಿದ್ದ ಮತ್ತೊಬ್ಬ ಆರೋಪಿ, ‘ದಾಖಲೆಗಳನ್ನು ನಿಮ್ಮ ವಿಳಾಸಕ್ಕೆ ಕಳುಹಿಸಲು ಶುಲ್ಕ ಪಾವತಿಸಬೇಕು’ ಎಂದಿದ್ದ. ಅದನ್ನು ನಂಬಿದ್ದ ಯುವತಿ, ಆರೋಪಿ ಹೇಳಿದ್ದ ಖಾತೆಗೆ ₹ 2.07 ಲಕ್ಷ ಹಾಕಿದ್ದರು. ಅದಾದ ನಂತರ ಆರೋಪಿಗಳು ನಾಪತ್ತೆಯಾಗಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು