ಶುಕ್ರವಾರ, ಅಕ್ಟೋಬರ್ 30, 2020
19 °C
ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರ ಮೇಲೂ ನಿಗಾ * ವಲಯಕ್ಕೊಂದು ಗಸ್ತು ವಾಹನ

ಕೋವಿಡ್‌ ನಿಯಂತ್ರಣಕ್ಕೆ ಮಾರ್ಷಲ್‌ಗಳ ಗಸ್ತು ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸುವವರನ್ನು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲು ಬಿಬಿಎಂಪಿ ಮಾರ್ಷಲ್‌ಗಳ ಗಸ್ತು ಪಡೆಯನ್ನು ರಚಿಸಿದೆ. ರಾತ್ರಿ ಹಗಲು ಕಾರ್ಯನಿರ್ವಹಿಸುವ ಈ ಪಡೆಗೆ ವಲಯಕ್ಕೊಂದು ಗಸ್ತು ವಾಹನವನ್ನು ಒದಗಿಸಿದೆ. ಪ್ರತಿ ಗಸ್ತು ವಾಹನದಲ್ಲಿ ಐವರು ಮಾರ್ಷಲ್‌ಗಳು ಒಬ್ಬ ಮೇಲ್ವಿಚಾರಕ ಇರಲಿದ್ದಾರೆ.

‘ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೆ ಅಡ್ಡಾಡುವುದು, ಅಂತರ ಕಾಪಾಡದಿರುವುದು ಮುಂತಾದ ಕೋವಿಡ್‌ ನಿಯಂತ್ರಣ ನಿಯಮಗಳ ಉಲ್ಲಂಘನೆ ಪತ್ತೆ ಹಚ್ಚಿ ದಂಡ ವಿಧಿಸಲು ಈ ಗಸ್ತು ವಾಹನಗಳನ್ನು ಆದ್ಯತೆ ಮೇರೆಗೆ ಬಳಸಿಕೊಳ್ಳಲಾಗುತ್ತದೆ. ಈ ವಾಹನಗಳು ರಾತ್ರಿ ಹಗಲು ಗಸ್ತು ತಿರುಗಲಿವೆ. ಇದರಲ್ಲಿರುವ ಮಾರ್ಷಲ್‌ಗಳು ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರನ್ನೂ ಪತ್ತೆ ಹಚ್ಚಿ ದಂಡ ವಿಧಿಸಲಿದ್ದಾರೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತ ಅವರು ಈ ಗಸ್ತು ವಾಹನಗಳಿಗೆ ಶುಕ್ರವಾರ ಚಾಲನೆ ನೀಡಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು