ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತ್ಯ 80 ಸಾವಿರ ಮಂದಿಗೆ ಲಸಿಕೆ: ಗೌರವ್ ಗುಪ್ತ

Last Updated 27 ಆಗಸ್ಟ್ 2021, 20:49 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿಯ ಪ್ರತಿ ವಾರ್ಡ್‌ಗೆ ನಿತ್ಯ 400 ಅಥವಾಅದಕ್ಕಿಂತಲೂ ಹೆಚ್ಚು ಲಸಿಕೆಯನ್ನು ಆದ್ಯತೆ ಮೇರೆಗೆ ಪೂರೈಕೆ ಮಾಡಲಾಗುತ್ತಿದೆ. ನಿತ್ಯ 80,000 ರಿಂದ 90,000 ಮಂದಿ ಲಸಿಕೆ ಪಡೆಯುತ್ತಿದ್ದಾರೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.

ನಗರದ ವಾಣಿಜ್ಯ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ಹೋಟೆಲ್ ಸಂಘಟನೆಗಳು ಹಾಗೂ ಸೇರಿದಂತೆ ಇನ್ನಿತರೆ ಸಂಘಗಳ ಜೊತೆ ಶುಕ್ರವಾರ ಆನ್‌ಲೈನ್‌ನಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

’ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಹೋಟೆಲ್, ರೆಸ್ಟೋರೆಂಟ್‌, ಕಚೇರಿಗಳು ಹಾಗೂ ಹೆಚ್ಚು ಜನಸೇರುವ ಸ್ಥಳದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆಯಬೇಕು’ ಎಂದರು.

‘ನಗರದಲ್ಲಿ ಶೇ 74 ರಷ್ಟು ಮೊದಲನೇ ಡೋಸ್ ಹಾಗೂ ಶೇ 26 ರಷ್ಟು ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ’ ಎಂದರು.

‘50 ಹಾಗೂ ಅದಕ್ಕಿಂತ ಹೆಚ್ಚಿನ ಮಂದಿ ಲಸಿಕೆ ಪಡೆಯಬೇಕಾದರೆ ಪಾಲಿಕೆ ವತಿಯಿಂದ ವಿಶೇಷ ಲಸಿಕಾ ಶಿಬಿರದ ವ್ಯವಸ್ಥೆ ಮಾಡಿ ಸ್ಥಳಕ್ಕೆ ಬಂದು ಲಸಿಕೆ ನೀಡಲಾಗುವುದು’ ಎಂದೂ ಹೇಳಿದರು.

ವಿಶೇಷ ಆಯುಕ್ತ (ಆರೋಗ್ಯ) ಡಿ. ರಂದೀಪ್‌, ‘ಇದೇ 31ರೊಳಗೆ ಎಲ್ಲ ಸಿಬ್ಬಂದಿ ಲಸಿಕೆ ಪಡೆದಿರಬೇಕು. ಸೆಪ್ಟೆಂಬರ್ 1 ರಿಂದ ಪಾಲಿಕೆಯ ಆರೋಗ್ಯಾಧಿಕಾರಿಗಳು, ಮಾರ್ಷಲ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೋವಿಡ್ ನಿಯಮವನ್ನು ಉಲ್ಲಂಘಿಸಿರುವುದು ಕಂಡುಬಂದರೆ ನಿಯಮಾನುಸಾರ ದಂಡ ವಿಧಿಸಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT