ಏಳು ಪ್ರಕರಣಗಳ ಪೈಕಿ ಮೂರು ಪ್ರಕರಣದಲ್ಲಿ ನ್ಯಾಯಾಲಯ ಈತನಿಗೆ ಶಿಕ್ಷೆ ವಿಧಿಸಿದೆ. ಇನ್ನೂ ನಾಲ್ಕು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಜಾಮೀನಿನ ಮೇಲೆ ಹೊರ ಬಂದು ಮತ್ತೆ ಮಟ್ಕಾ ದಂಧೆ ಹಾಗೂ ಸಮಾಜಘಾತುಕ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ. ಕಾನೂನು ಬಾಹಿರ ಕೃತ್ಯಗಳನ್ನು ನಿಯಂತ್ರಿಸುವುದು ಕಷ್ಟ ಸಾಧ್ಯವಾದ ಕಾರಣ ಮತ್ತೆ ಈತನನ್ನು ಪ್ರತಿಬಂಧಕ ಕಾಯಿದೆ ಅಡಿ ಬಂಧನದಲ್ಲಿಡಲು ಸಿಸಿಬಿ ಅಧಿಕಾರಿಗಳು ನಗರ ಪೊಲೀಸ್ ಕಮೀಷನರ್‌ಗೆ ಪ್ರಸ್ತಾವ ಸಲ್ಲಿಸಿದ್ದರು.