ಭಾನುವಾರ, ಮೇ 16, 2021
22 °C

‘ಋತುಸ್ರಾವ ಮುಂದೂಡುವುದು ಮೌಢ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನೆಲಮಂಗಲ: ಹೆರಿಗೆ ಮತ್ತು ಮಾಸಿಕ ಸ್ರಾವ (ಮುಟ್ಟು) ಸಹಜ ಕ್ರಿಯೆಗಳು. ಆದರೆ, ವಿಶೇಷ ದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ ವೈದ್ಯರ ನೆರವಿನಿಂದ ಮುಟ್ಟು ಮುಂದು ಹಾಕುವ ಮೌಢ್ಯದಿಂದ ವಿದ್ಯಾವಂತ ಮಹಿಳೆಯರು ಹೊರತಾಗಿಲ್ಲ’ ಎಂದು ಲೇಖಕಿ ಡಾ.ವಸುಂಧರಾ ಭೂಪತಿ ಬೇಸರ ವ್ಯಕ್ತಪಡಿಸಿದರು.

‘ಮತ್ತೆ ಕಲ್ಯಾಣ’ ಸಹಮತ ವೇದಿಕೆ ಪಟ್ಟಣದ ಪವಾಡಶ್ರೀ ಬಸವಣ್ಣದೇವರ ಮಠದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದರು.

ಶರಣ ತತ್ವದ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಮಾತನಾಡಿ, ‘ದಲಿತ ಚಳವಳಿಯಿಂದ ಅರಳಿದ ಡಾ.ಎಲ್‌.ಹನುಮಂತಯ್ಯ ಸಮ್ಮೇಳನಾಧ್ಯಕ್ಷರಾಗಿದ್ದಾರೆ. ಶರಣರು 12ನೇ ಶತಮಾನದಲ್ಲಿಯೇ ಸಮಾನತೆಗಾಗಿ ಶ್ರಮಿಸಿದ್ದರು’ ಎಂದು ಹೇಳಿದರು.

ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಇದ್ದರು. ಬಸವಣ್ಣದೇವರ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು