ಬೆಂಗಳೂರು: ‘ಪೂರ್ಣಚಂದ್ರ ತೇಜಸ್ವಿ ಅವರುಪರಿಸರ ಕುರಿತಾದ ಲೇಖನಗಳ ಮೂಲಕ ಸ್ಫೂರ್ತಿಯಾಗಿದ್ದಾರೆ. ಅವರ ಬದುಕು ಹಾಗೂ ಬರಹವು ಯುವಜನರಿಗೆ ಪ್ರೇರಣೆಯಾಗಬೇಕು’ ಎಂದುವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ 84ನೇ ಜನ್ಮದಿನದ ಅಂಗವಾಗಿ ನಗರದಲ್ಲಿ ಬುಧವಾರ ಪರಿಸರ, ನಿಸರ್ಗ ಸಂರಕ್ಷಣಾ ಸಂಸ್ಥೆಯು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಮತ್ತು ಪೀಣ್ಯ ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ‘ತೇಜಸ್ವಿ ಜೀವಲೋಕ -9 ಹಾಗೂ ಕುರಿಂಜಿ ಲೋಕ’ ಛಾಯಾಚಿತ್ರ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
‘ಪ್ರಕೃತಿಯನ್ನು ತೇಜಸ್ವಿ ಅವರಷ್ಟು ಪ್ರೀತಿಸಿದವರನ್ನು ನಾನುನೋಡಿಯೇ ಇಲ್ಲ. ತಮ್ಮ ಬದುಕು ಬರಹದ ಮೂಲಕ ಅವರು ಹೆಸರು ಮಾಡಿದವರು.ಎಂದಿಗೂ ತಾನು ಕುವೆಂಪು ಮಗ ಎಂದು ಹೇಳಿ, ಲಾಭ ಪಡೆಯುವ ಪ್ರಯತ್ನ ಮಾಡಿಲ್ಲ. ಎಲ್ಲರೂ ತೇಜಸ್ವಿಯಾಗಲು ಸಾಧ್ಯವಿಲ್ಲ. ಆದರೆ, ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ
ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.
ಕರ್ನಾಟಕ ಚಿತ್ರಕಲಾ ಪರಿಷತ್ತು ಅಧ್ಯಕ್ಷ ಬಿ.ಎಲ್. ಶಂಕರ್, ‘ಅರಣ್ಯ ಬೆಳೆಸು
ವುದು ಕೇವಲ ಗ್ರಾಮೀಣ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ರಾಜ್ಯ ಸರ್ಕಾರ ನಗರ ಪ್ರದೇಶಗಳಲ್ಲಿ ಕೈಗಾರಿಕೆಗಳಿಗೆ ನೀಡುವ ಭೂಮಿಯಲ್ಲಿ ಶೇ 25ರಷ್ಟು ಪ್ರದೇಶದಲ್ಲಿ ಅರಣ್ಯ ಬೆಳೆಸಬೇಕು ಎಂದು ನಿಯಮ ರೂಪಿಸಬೇಕು’ ಎಂದು ಮನವಿ ಮಾಡಿದರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾತನಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.