ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಂಪನಿ ನೋಂದಣಿ ಆಗಲಿಲ್ಲ ಎಂದು ಟೆಕಿ ಅಳಲು: ನೆರವಿಗೆ ಸಿದ್ದ– ಎಂ.ಬಿ.ಪಾಟೀಲ್‌

Published : 30 ಜುಲೈ 2023, 7:51 IST
Last Updated : 30 ಜುಲೈ 2023, 7:51 IST
ಫಾಲೋ ಮಾಡಿ
Comments

ಬೆಂಗಳೂರು: ಬೆಂಗಳೂರಿನಲ್ಲಿ ಕಂಪನಿ ನೋಂದಾಯಿಸಲು ಆಗದ್ದಕ್ಕೆ ಟ್ವಿಟರ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದ ಭಾರತೀಯ ಮೂಲದ ಅಮೆರಿಕ ಟೆಕಿಯೊಬ್ಬರಿಗೆ ನೆರವು ನೀಡುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದ್ದಾರೆ.

ಈ ಕುರಿತು ಜುಲೈ 27 ರಂದು ಟ್ವೀಟ್ ಮಾಡಿದ್ದ ಟೆಕಿ ಬ್ರಿಜ್ ಸಿಂಗ್ ಎನ್ನುವರು, ‘ಎರಡು ತಿಂಗಳು ಕಳೆದರೂ ಬೆಂಗಳೂರಲ್ಲಿ ನನ್ನ ಹೊಸ ಕಂಪನಿ ನೋಂದಣಿ ಮಾಡೋಕೆ ಆಗಲಿಲ್ಲ. ಭಾರವಾದ ಹೃದಯದಿಂದ ಅಮೆರಿಕಕ್ಕೆ ವಾಪಸ್ ಹೋಗುತ್ತಿದ್ದೇನೆ’ ಎಂದು ಹೇಳಿಕೊಂಡಿದ್ದರು.

‘ಬೆಂಗಳೂರು, ಭಾರತವನ್ನು ಪ್ರೀತಿಸುತ್ತೇನೆ. ಆದರೆ, ಮನೆಗೆ ಬಂದ ನಂತರ ಸಾಕಷ್ಟು ಅನುಭವ ಆಗಿದೆ. ಭಾರತದಲ್ಲಿ ಕಂಪನಿ ನೋಂದಾಯಿಸಲು (ಬೆಂಗಳೂರು) ಎರಡು ತಿಂಗಳು ಗತಿಸಿದರೂ ಆಗಿಲ್ಲ. ಇದರಿಂದ ಕಂಪನಿ ಹೂಡಿಕೆದಾರರು, ಸಹ ಸಂಸ್ಥಾಪಕರು ಹಾಗೂ ಗ್ರಾಹಕರ ಪ್ರತಿಕ್ರಿಯೆ ವಿಭಿನ್ನ ಮಟ್ಟದಲ್ಲಿ ಕಂಡು ಬಂದಿದೆ’ ಎಂದು ಹೇಳಿಕೊಂಡಿದ್ದಾರೆ. ‘ನಾನು ಅಮೆರಿಕಕ್ಕೆ ಹಿಂತಿರುಗುವ ಸಮಯ ಬಂದಿದೆ. ಇದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇನೆ’ ಎಂದು ಅಳಲು ತೋಡಿಕೊಂಡಿದ್ದರು.

ಬ್ರಿಜ್ ಸಿಂಗ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ, ‘ನಿಮ್ಮ ಸಮಸ್ಯೆ ಕೇಳಿ ಬೇಸರವಾಯ್ತು, ಕಂಪನಿಗಳ ಸ್ಥಾಪನೆಗೆ ಸಂಬಂಧಿಸಿದ ಕೆಲಸಗಳನ್ನು ಸಾಮಾನ್ಯವಾಗಿ ಸಿಎಸ್‌ಗಳು ನೋಡಿಕೊಳ್ಳುತ್ತಾರೆ. ಸಂಬಂಧಪಟ್ಟ ಕಂಪನಿಗಳ ರಿಜಿಸ್ಟ್ರಾರ್‌ (RoC) ಕಡತಗಳನ್ನು ತೆರವುಗೊಳಿಸಲು 15-20 ದಿನಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು. (ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ ಮತ್ತು ಎಲ್ಲಾ ರಾಜ್ಯಗಳಿಗೂ ಒಂದೇ ಆಗಿರುತ್ತದೆ). ಕೇಂದ್ರ ಸರ್ಕಾರದ ಸಮಸ್ಯೆಯಾಗಿದೆ. ಆದಾಗ್ಯೂ, ನಿಮಗೆ ಯಾವುದೇ ಸಮಸ್ಯೆಗಳಿದ್ದರೆ ನಾವು ಅದನ್ನು ಪರಿಹರಿಸುತ್ತೇವೆ’ ಎಂದು ಹೇಳಿದ್ದಾರೆ.

ಓದಿ... 2 ತಿಂಗಳಾದರೂ ಬೆಂಗಳೂರಲ್ಲಿ ಕಂಪನಿ ನೋಂದಣಿ ಆಗಲಿಲ್ಲ, ವಾಪಸ್ ಯುಎಸ್‌ಗೆ ಎಂದ ಟೆಕಿ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT