ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರ‍್ಯಾಂಪ್‌ ವಾಕ್ ವೇಳೆ ಎಂಬಿಎ ವಿದ್ಯಾರ್ಥಿನಿ ಸಾವು

Last Updated 19 ಅಕ್ಟೋಬರ್ 2019, 16:42 IST
ಅಕ್ಷರ ಗಾತ್ರ

ಬೆಂಗಳೂರು: ಕಾಲೇಜಿನ ಹೊಸ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ರ‍್ಯಾಂಪ್‌ ವಾಕ್ ಪ್ರದರ್ಶಿಸಲು ತಯಾರಿ ನಡೆಸುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಶಾಲಿನಿ (21) ಎಂಬುವರು ಮೃತಪಟ್ಟಿದ್ದಾರೆ.

ಪೀಣ್ಯ ಠಾಣೆ ವ್ಯಾಪ್ತಿಯ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಮತ್ತು ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ.

‘ಬಟ್ಟೆ ವ್ಯಾಪಾರಿ ಶ್ರೀರಾಮಪುರದ ರಾಜನ್ ಹಾಗೂ ಅಂಬಿಕಾ ದಂ‍ಪತಿ ಪುತ್ರಿ ಆಗಿದ್ದ ಶಾಲಿನಿ, ಎಂಬಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡು ತ್ತಿದ್ದರು. ಶುಕ್ರವಾರ ಕಾಲೇಜಿನ ಅವಧಿ ಮುಗಿದ ಬಳಿಕ ರ‍್ಯಾಂಪ್ ವಾಕ್ ತಯಾರಿ ನಡೆಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ’ ಎಂದು ಪೀಣ್ಯ ಪೊಲೀಸರು ಹೇಳಿದರು.

‘ಕಾಲೇಜಿಗೆ ಹೊಸದಾಗಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳನ್ನು ಸ್ವಾಗತಿ ಸಲು ಪ್ರತಿ ವರ್ಷ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಅದೇ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತವೆ. ಶಾಲಿನಿ ಹಾಗೂ ಸ್ನೇಹಿತೆಯರು, ರ‍್ಯಾಂಪ್ ವಾಕ್ ಮಾಡುವುದಾಗಿ ಹೇಳಿದ್ದರು. ಅದಕ್ಕಾಗಿ ಕಾಲೇಜಿನ ಸಭಾಂಗಣದಲ್ಲಿ ಹಲವು ದಿನಗಳಿಂದ ತಯಾರಿ ಸಹ ನಡೆಸುತ್ತಿದ್ದರು’

‘ರ‍್ಯಾಂ‍ಪ್ ವಾಕ್‌ ಮಾಡಿದ ಶಾಲಿನಿ, ವೇದಿಕೆಯ ಪಕ್ಕಕ್ಕೆ ಬಂದು ನಿಂತಿದ್ದರು. ಸ್ನೇಹಿತೆಯರು ವಾಕ್ ಮಾಡುತ್ತಿದ್ದರು. ಅದೇ ವೇಳೆ ಶಾಲಿನಿ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು. ಅದನ್ನು ಗಮನಿಸಿದ ಸಹಪಾಠಿಗಳು, ಅವರನ್ನು ಪೀಪಲ್ ಟ್ರೀ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗಮಧ್ಯೆಯೇ ಅವರು ಮೃತ
ಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.

ಅಸಹಜ ಸಾವು ಪ್ರಕರಣ: ‘ತಂದೆ ರಾಜನ್ ನೀಡಿರುವ ದೂರು ಆಧರಿಸಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸಾವಿಗೆ ನಿಖರ ಕಾರಣವೇನು ಎಂಬುದು ಗೊತ್ತಾಗಿಲ್ಲ. ದೇಹದ ಕೆಲ ಮಾದರಿಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT