ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾಲೇಜು: ಮೊದಲ ದಿನ ಶೇ 60 ಹಾಜರಾತಿ

Last Updated 1 ಡಿಸೆಂಬರ್ 2020, 23:13 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಕಾರಣದಿಂದ ಸುಮಾರು ಎಂಟು ತಿಂಗಳುಗಳಿಂದ ಮುಚ್ಚಿದ್ದ ವೈದ್ಯಕೀಯ ಕಾಲೇಜುಗಳು ಮಂಗಳವಾರ ಆರಂಭವಾಗಿದ್ದು, ಮೊದಲ ದಿನವೇ ಶೇ 60ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.

ಮುಂದಿನ 3–4 ದಿನಗಳಲ್ಲಿ ಶೇ 90ರಷ್ಟು ಹಾಜರಾತಿಯನ್ನು ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧಿಕಾರಿಗಳು ನಿರೀಕ್ಷೆ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ವಿಶ್ವವಿದ್ಯಾಲಯದ ಕುಲಪತಿ ಡಾ. ಸಚ್ಚಿದಾನಂದ, ‘ಮೊದಲ ದಿನ ಶೇ 60ರಷ್ಟು ಹಾಜರಾತಿ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು.

‘ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಅಗತ್ಯ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಫ್‌ಲೈನ್‌ ತರಗತಿಗೆ ಹಾಜರಾಗುವ ಆಸಕ್ತಿ ತೋರಿಸುತ್ತಿದ್ದಾರೆ’ ಎಂದು ವಿವಿಧ ವೈದ್ಯಕೀಯ ಕಾಲೇಜುಗಳ ಪ್ರಾಂಶುಪಾಲರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ನಮ್ಮ ಕಾಲೇಜಿನಲ್ಲಿ ಮೊದಲ ದಿನವೇ ಸುಮಾರು ಶೇ 70ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಹೊರರಾಜ್ಯದ ವಿದ್ಯಾರ್ಥಿಗಳು ಗೈರಾಗಿದ್ದು, ಅವರೂ ಹಾಜರಾದರೆ ಶೇ 100ರಷ್ಟು ಹಾಜರಾತಿ ಸಾಧ್ಯವಾಗಲಿದೆ’ ಎಂದು ಕೆಂಪೇಗೌಡ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ವಿ.ಟಿ. ವೆಂಕಟೇಶ್‌ ತಿಳಿಸಿದರು.

ಉನ್ನತ ಶಿಕ್ಷಣ ಸಂಸ್ಥೆಗಳಿಗೆ (ಪದವಿ ಮತ್ತು, ಸ್ನಾತಕೋತ್ತರ ಪದವಿ) ಹೋಲಿಸಿದರೆ, ವೈದ್ಯಕೀಯ ಕಾಲೇಜುಗಳಲ್ಲಿ ಮೊದಲ ದಿನ ಹಾಜರಾತಿ ಅತೀ ಹೆಚ್ಚಿದೆ. ನ. 17ರಿಂದಲೇ ಉನ್ನತ ಶಿಕ್ಷಣ ಸಂಸ್ಥೆಗಳು ಆಫ್‌ಲೈನ್‌ ತರಗತಿಗಳನ್ನು ಆರಂಭಿಸಿದ್ದರೂ ಒಟ್ಟು ಹಾಜರಾತಿ ಶೇ 20 ದಾಟಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT