ಬೆಂಗಳೂರು: ಎನ್ಆರ್ಐ ಕೋಟಾದಡಿ ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಆರೋಪದಡಿ ನೆಲಮಂಗಲದ ರಘು ಎಂಬಾತನ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಎನ್.ಡಿ.ನರಸೇಗೌಡ ಅವರ ಪುತ್ರಿ ಎನ್.ಎನ್.ನಯನಾ ಅವರಿಗೆ ಸೀಟು ಕೊಡಿಸುವುದಾಗಿ ನಂಬಿಸಿ ಆರೋಪಿ ವಂಚಿಸಿದ್ದ. ಅಲ್ಲದೇ ₹5 ಸಾವಿರ ಹಣ ಪಡೆದುಕೊಂಡಿದ್ದ ಎಂದು ಪೊಲೀಸರು ಹೇಳಿದರು.

ದಾಖಲಾತಿಗಳ ಪರಿಶೀಲನೆ ವೇಳೆ ಆಸ್ಟ್ರೇಲಿಯಾದ ಲಾಂಛನ, ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ, ಸಿಡ್ನಿಯ ಮುದ್ರೆ ಹಾಗೂ ಅಶೋಕ ಸ್ತಂಭದ ಚಿಹ್ನೆಯನ್ನು ಕಂಪ್ಯೂಟರ್ ಗ್ರಾಫಿಕ್ಸ್ನಿಂದ ಸೃಷ್ಟಿಸಿ ಸಲ್ಲಿಸಿರುವುದು ಪತ್ತೆಯಾಗಿತ್ತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ದೂರು ನೀಡಿದ್ದರು. ದೂರು ಆಧರಿಸಿ ರಘು ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.