ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಸಂಜನಾ ಗಲ್ರಾನಿಗೆ ವೈದ್ಯಕೀಯ ಪರೀಕ್ಷೆ

Last Updated 8 ಸೆಪ್ಟೆಂಬರ್ 2020, 9:52 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು, ನಟಿ ಸಂಜನಾ ಗಲ್ರಾನಿ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಗೆ ಕರದೊಯ್ದಿದ್ದಾರೆ.

ಇಂದಿರಾನಗರದಲ್ಲಿರುವ ಮನೆಯಿಂದ ಸಂಜನಾ ಅವರನ್ನು ವಶಕ್ಕೆ ಪಡೆದು ಚಾಮರಾಜಪೇಟೆಯಲ್ಲಿರುವ ಕಚೇರಿಗೆ ಕರೆತಂದಿದ್ದ ಸಿಸಿಬಿ ಪೊಲೀಸರು, ಗಂಟೆಗಟ್ಟಲೇ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ. ಇದಾದ ನಂತರ, ಅವರನ್ನು ವೈದ್ಯಕೀಯ ಹಾಗೂ ಕೊರೊನಾ ಸೋಂಕು ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಂಜನಾ ಅವರನ್ನು ಸದ್ಯಕ್ಕೆ ಪೊಲೀಸರ ವಶದಲ್ಲಿದ್ದಾರೆ. ವೈದ್ಯಕೀಯ ಹಾಗೂ ಕೊರೊನಾ ಪರೀಕ್ಷಾ ವರದಿ ಬಂದ ನಂತರವೇ ಸಂಜನಾ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT