ಬೆಂಗಳೂರು: ಎಂಬಿಬಿಎಸ್ ಸೀಟು ಕೊಡಿಸುವುದಾಗಿ ನಂಬಿಸಿ, ಯುವತಿಯಿಂದ ₹25 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಆಯೇಷಾ ಖಥುಮ್ ಎಂಬ ವಿದ್ಯಾರ್ಥಿನಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ನಂಬಿಸಿದ್ದ ಕೆ.ಪಿ.ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 318(4), 318(2) ಸೇರಿ ಒಟ್ಟು 8 ಸೆಕ್ಷನ್ಗಳಡಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಕಿಮ್ಸ್ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆಯೇಷಾ ಖಥುಮ್ ಅವರ ತಂದೆ ಲಾಲ್ ಬಾಬು ಅವರು ದೂರು ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

‘ಮಗಳಿಗೆ ಉತ್ತಮ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟು ಕೊಡಿಸುವ ಪ್ರಯತ್ನದಲ್ಲಿ ತಂದೆ ಲಾಲ್ಬಾಬು ಇದ್ದರು. ಈ ನಡುವೆ ಸೈಯದ್ ತಬ್ರೇಜ್ ಹಾಗೂ ಶಂಶೇರ್ ಬೇಗ್ ಅವರ ಪರಿಚಯವಾಗಿತ್ತು. ತಮಗೆ ಕಿಮ್ಸ್ ಮೆಡಿಕಲ್ ಕಾಲೇಜಿನ ಅಧ್ಯಕ್ಷರು ಪರಿಚಯ ಇರುವುದಾಗಿ ಹೇಳಿಕೊಂಡಿದ್ದರು. ಮೆಡಿಕಲ್ ಕಾಲೇಜಿನ ಅಧ್ಯಕ್ಷರೆಂದು ಹೇಳಿ ಕೆ.ಪಿ. ಶರತ್ ಅವರನ್ನು ಆರೋಪಿಗಳು ಪರಿಚಯಿಸಿದ್ದರು. ಬನಶಂಕರಿ 2ನೇ ಹಂತದಲ್ಲಿ ಶರತ್ ಅವರನ್ನು ಭೇಟಿ ಮಾಡಲಾಗಿತ್ತು. ಈ ವೇಳೆ ಆಯೇಷಾ ಖಥುಮ್ ಅವರಿಗೆ ಸೀಟು ಕೊಡಿಸುವುದಾಗಿ ನಂಬಿಸಿ, ಶೈಕ್ಷಣಿಕ ದಾಖಲೆ ಪಡೆದುಕೊಳ್ಳಲಾಗಿತ್ತು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಅದಾದ ಕೆಲವು ದಿನಗಳ ಬಳಿಕ ಲಾಲ್ಬಾಬು ಅವರನ್ನು ಆರೋಪಿಗಳು ಹೋಟೆಲ್ನಲ್ಲಿ ಭೇಟಿ ಮಾಡಿದ್ದರು. ನಂತರ, ಹೋಟೆಲ್ ಒಂದರಲ್ಲಿ ಭೇಟಿಯಾಗಿದ್ದ ಆರೋಪಿಗಳು, ₹25 ಲಕ್ಷ ಕೊಟ್ಟರೆ ಸೀಟು ಕೊಡಿಸುವುದಾಗಿ ಹೇಳಿದ್ದರು. ಆರೋಪಿಗಳ ಮಾತು ನಂಬಿದ್ದ ಯುವತಿ ಕಡೆಯವರು ಹಂತ ಹಂತವಾಗಿ ಯುಪಿಐ, ಚೆಕ್ ರೂಪದಲ್ಲಿ ₹10 ಲಕ್ಷ ಹಣ ನೀಡಿದ್ದರು. ಬಳಿಕ, ₹15 ಲಕ್ಷವನ್ನು ನಗದು ರೂಪದಲ್ಲಿ ನೀಡಲಾಗಿತ್ತು’ ಎಂದು ದೂರು ನೀಡಲಾಗಿದೆ.

‘ಹಣ ತೆಗೆದುಕೊಂಡ ಬಳಿಕ ಆರೋಪಿಗಳು ಎಂಬಿಬಿಎಸ್ ಸೀಟು ಕೊಡಿಸದೇ ವಂಚಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.