ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಸ್‌ಸಿ: ನ.4ರಿಂದ 7ನೇ ಅಖಿಲ ಭಾರತೀಯ ಸಮ್ಮೇಳನ

Published 27 ಅಕ್ಟೋಬರ್ 2023, 16:14 IST
Last Updated 27 ಅಕ್ಟೋಬರ್ 2023, 16:14 IST
ಅಕ್ಷರ ಗಾತ್ರ

ಬೆಂಗಳೂರು: ಮೆಡಿಕಲ್ ಸರ್ವಿಸ್ ಸೆಂಟರ್‌ನ (ಎಂಎಸ್‌ಸಿ) 7ನೇ ಅಖಿಲ ಭಾರತೀಯ ಸಮ್ಮೇಳನವನ್ನು ನ.4 ಮತ್ತು ನ.5ರಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್‌ಐ) ಹಮ್ಮಿಕೊಂಡಿದೆ. 

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೆಂಟರ್‌ನ ರಾಜ್ಯ ಘಟಕದ ಉಪಾಧ್ಯಕ್ಷ ಡಾ.ಕೆ.ಎಸ್. ಗಂಗಾಧರ್, ‘ಸಮ್ಮೇಳನವನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಎಂ.ವಿ. ನಾಡಕರ್ಣಿ ಉದ್ಘಾಟಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ಬಿಎಂಸಿಆರ್‌ಐ ಡೀನ್ ಡಾ. ರಮೇಶ್ ಕೃಷ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ವಿವಿಧ ರಾಜ್ಯಗಳ ವೈದ್ಯಕೀಯ ತಜ್ಞರು ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ಹೇಳಿದರು. 

‘ಸಾರ್ವತ್ರಿಕ ಆರೋಗ್ಯ ವಿಮೆ, ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸುವಿಕೆ, ಸಾರ್ವಜನಿಕ ಆರೋಗ್ಯ ಬಲಪಡಿಸುವಿಕೆ, ಉಚಿತ ಅಥವಾ ಕೈಗೆಟಕುವ ಶುಲ್ಕದಡಿ ವೈದ್ಯಕೀಯ ಶಿಕ್ಷಣ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ’ ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT