ಗುರುವಾರ , ಜೂನ್ 30, 2022
21 °C

ಕಪ್ಪು ಶಿಲೀಂದ್ರ ರೋಗ: ₹ 1.36 ಲಕ್ಷ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಪ್ಪು ಶಿಲೀಂದ್ರ ರೋಗದ ಔಷಧಿ ಮಾರಾಟ ಮಾಡುವುದಾಗಿ ಹೇಳಿ ನಗರದ ನಿವಾಸಿಯೊಬ್ಬರಿಂದ ₹ 1.36 ಲಕ್ಷ ಪಡೆದು ವಂಚಿಸಲಾಗಿದೆ.

‘ಯಲಹಂಕದ ನಿವಾಸಿಯಾಗಿರುವ ಯುವತಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಮೂಲಗಳು ಹೇಳಿವೆ.

‘ದೂರುದಾರರ ತಂದೆಯು ಕಪ್ಪು ಶಿಲೀಂದ್ರ ರೋಗದಿಂದ ಬಳಲುತ್ತಿದ್ದಾರೆ. ಅವರಿಗೆ ‘ಆ್ಯಂಫೊಟೆರಿಸಿನ್‌–ಬಿ’ ಔಷಧಿ ತುರ್ತಾಗಿ ನೀಡಬೇಕೆಂದು ವೈದ್ಯರು ಹೇಳಿದ್ದರು. ಔಷಧಿಗಾಗಿ ಹಲವೆಡೆ ಹುಡುಕಾಡಿದ್ದ ದೂರುದಾರರು, ಆನ್‌ಲೈನ್‌ನಲ್ಲಿ ಸಿಕ್ಕ ಮೊಬೈಲ್‌ ನಂಬರ್‌ಗೆ ಕರೆ ಮಾಡಿ ವಿಚಾರಿಸಿದ್ದರು.’

‘ಔಷಧಿ ನೀಡುವುದಾಗಿ ಹೇಳಿದ್ದ ಆರೋಪಿ, ಮುಂಗಡವಾಗಿ ಹಣ ಪಾವತಿಸುವಂತೆ ಹೇಳಿದ್ದ. ಅದನ್ನು ನಂಬಿದ್ದ ಯುವತಿ, ಆರೋಪಿ ಹೇಳಿದ್ದ ಖಾತೆಗಳಿಗೆ ಹಂತ ಹಂತವಾಗಿ ₹ 1.36 ಲಕ್ಷ ಪಾವತಿಸಿದ್ದರು. ಅದಾದ ನಂತರ ಯಾವುದೇ ಔಷಧಿ ನೀಡದೇ ಆರೋಪಿ ನಾಪತ್ತೆಯಾಗಿದ್ದಾನೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು