ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಷಧ ತಯಾರಿಕಾ ಪಾರ್ಕ್‌ ಸ್ಥಾಪನೆ: ಸದಾನಂದಗೌಡ

Last Updated 15 ಜನವರಿ 2021, 20:11 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಔಷಧ ತಯಾರಿಕೆಗೆ ಬೇಕಾಗುವ ಎಪಿಐ ಮತ್ತು ವೈದ್ಯಕೀಯ ಉಪಕರಣಗಳ ತಯಾರಿಕೆ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಮೂರು ಔಷಧ (ಬಲ್ಕ್‌ ಡ್ರಗ್‌) ಪಾರ್ಕ್‌ಗಳು ಮತ್ತು ನಾಲ್ಕು ವೈದ್ಯಕೀಯ ಉಪಕರಣ ತಯಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ನಗರದ ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ಶುಕ್ರವಾರ ಮೂತ್ರ ಪಿಂಡ ಕಸಿ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವುಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ₹1,000 ಕೋಟಿ ವೆಚ್ಚ ಮಾಡುತ್ತಿದೆ. ಇದರಿಂದ ವಿದೇಶಗಳ ಮೇಲೆ ಅವಲಂಬಿತವಾಗುವುದು ತಪ್ಪುತ್ತದೆ ಎಂದರು.

'ಕೇಂದ್ರ ಸರ್ಕಾರ ದೇಶದಾದ್ಯಂತ 7,000ಕ್ಕೂ ಅಧಿಕ ಜನೌಷಧ ಕೇಂದ್ರಗಳ ಮೂಲಕ ಸಾಮಾನ್ಯರಿಗೂ ಕೈಗೆಟಕುವ ಬೆಲೆಯಲ್ಲಿ ಗುಣಮಟ್ಟದ ಔಷಧಗಳನ್ನು ಒದಗಿಸುತ್ತಿದೆ. ನಿಮ್ಮಲ್ಲಿ ಬರುವ ಆರ್ಥಿಕವಾಗಿ ದುರ್ಬಲ ವರ್ಗದ ರೋಗಿಗಳಿಗೆ ಜನರಿಕ್ ಔಷಧಗಳನ್ನೇ ತೆಗೆದುಕೊಳ್ಳಲು ಪ್ರಿಸ್ಕ್ರಿಪ್ಷನ್‌ ಬರೆದುಕೊಡಬೇಕು ಎಂಬುದು ನನ್ನ ಪ್ರೀತಿ ಪೂರ್ವಕ ಆಗ್ರಹ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT