ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಸಚಿವರಿಂದ ಹಿರಿಯ ಅಧಿಕಾರಿಗಳ ಸಭೆ

Last Updated 1 ಜನವರಿ 2021, 20:31 IST
ಅಕ್ಷರ ಗಾತ್ರ

ಬೆಂಗಳೂರು: ವರ್ಷದ ಮೊದಲ ದಿನವೇ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಸಮಾಜ ಘಾತುಕ ಶಕ್ತಿಗಳ ನಿಗ್ರಹ ಕುರಿತು ಚರ್ಚಿಸಿದರು.

ಸೈಬರ್‌ ಅಪರಾಧ ನಿಯಂತ್ರಣಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಚಿವರು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯ ಬಡ್ತಿ, ನೇಮಕಾತಿಗೆ ಸಂಬಂಧಿಸಿದಂತೆಯೂ ಮಾಹಿತಿ ಪಡೆದರು.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್‌, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಸೇರಿದಂತೆ ಹಲವು ಹಿರಿಯ ಐಪಿಎಸ್‌ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT