ಬೆಂಗಳೂರು: ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜೀವಿನಿ ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಮೇಘಾಲಯದ ಮಹಿಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೇಘಾಲಯದ ಅಗತ ಬೈತಿಯಂಗುಂ (36) ಆತ್ಮಹತ್ಯೆ ಮಾಡಿಕೊಂಡವರು.

ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಸಂಜೀವಿನಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ನೆಲಸಿದ್ದರು. ಮೂರು ದಿನಗಳ ಹಿಂದೆ ಅಗತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆಯಿದೆ. ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಗೊತ್ತಾಗಿಲ್ಲ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಮಣಿಪುರದ ನವಾಜ್ ಶರೀಫ್ ಜತೆಗೆ ಕಳೆದ ಮೂರು ವರ್ಷದಿಂದ ಅಗತ ಸಹ ಜೀವನ ನಡೆಸುತ್ತಿದ್ದರು. ದಿನ ಕಳೆದಂತೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ನಿತ್ಯ ಗಲಾಟೆ ಮಾಡಿಕೊಳ್ಳುತ್ತಿದ್ದರು ಎಂದು ಪೊಲೀಸರು ಹೇಳಿದರು.

ಅಗತಗೆ 36 ವರ್ಷ ವಯಸ್ಸಾಗಿತ್ತು. ನವಾಜ್ ಶರೀಫ್ಗೆ 20 ವರ್ಷ. ವಯಸ್ಸಿನ ಅಂತರದ ಕಾರಣಕ್ಕೆ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ಇಬ್ಬರೂ ಗಲಾಟೆ ಮಾಡಿಕೊಳ್ಳುತ್ತಿದ್ದರು ಎಂಬುದಾಗಿ ಅಕ್ಕಪಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ. ನವಾಜ್ ಷರೀಫ್ ಫೋನ್ನಲ್ಲಿ ಯಾರೊಂದಿಗಾದರೂ ಮಾತನಾಡುತ್ತಿರುವಾಗ ಅಗತ ಜಗಳ ಮಾಡುತ್ತಿದ್ದರು. ಬುಧವಾರ ರಾತ್ರಿಯೂ ಫೋನ್ನಲ್ಲಿ ಮಾತನಾಡುತ್ತಿರುವ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಅದಾದ ಮೇಲೆ ಅಗತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.