ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಜೆಸ್ಟಿಕ್‌: ಯುವತಿಗೆ ಕಿರುಕುಳ ನೀಡಿದ್ದವನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಜನ

Published 12 ಮೇ 2024, 15:59 IST
Last Updated 12 ಮೇ 2024, 15:59 IST
ಅಕ್ಷರ ಗಾತ್ರ

ಬೆಂಗಳೂರು: ಮೆಜೆಸ್ಟಿಕ್‌ನಲ್ಲಿ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಮೆಟ್ರೊ ನಿಲ್ದಾಣದತ್ತ ಹೊರಟಿದ್ದ ಯುವತಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಜನರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಮೇ 5ರಂದು ಸಂಜೆ ನಡೆದಿರುವ ಕೃತ್ಯದ ಬಗ್ಗೆ 23 ವರ್ಷ ವಯಸ್ಸಿನ ಯುವತಿ ದೂರು ನೀಡಿದ್ದಾರೆ. ಕೃತ್ಯ ಎಸಗಿದ್ದ ಆರೋಪಿ ಹನುಮಂತ ಎಂಬುದು ಗೊತ್ತಾಗಿದ್ದು, ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರ ಯುವತಿ, ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಬಿಎಂಟಿಸಿ ನಿಲ್ದಾಣದಿಂದ ಮೆಟ್ರೊ ನಿಲ್ದಾಣದತ್ತ ನಡೆದುಕೊಂಡು ಹೊರಟಿದ್ದರು. ಅವರನ್ನು ಹಿಂಬಾಲಿಸಿದ್ದ ಆರೋಪಿ, ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದ. ಗಾಬರಿಗೊಂಡು ಯುವತಿ ಕೂಗಾಡಿದ್ದರು. ಸ್ಥಳದಲ್ಲಿ ಸೇರಿದ್ದ ಜನರು, ಆರೋಪಿಯನ್ನು ಹಿಡಿದು ಥಳಿಸಿದ್ದರು’ ಎಂದು ತಿಳಿಸಿದರು.

‘ಕೃತ್ಯದ ಬಗ್ಗೆ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT