ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಅಣೆಕಟ್ಟಿಗೆ ಅನುಮತಿ ದೊರೆತರೆ ಮಾತ್ರ ಮತದಾನ: ಎಚ್ಚರಿಕೆ

Published 12 ಮಾರ್ಚ್ 2024, 15:40 IST
Last Updated 12 ಮಾರ್ಚ್ 2024, 15:40 IST
ಅಕ್ಷರ ಗಾತ್ರ

ಬೆಂಗಳೂರು: ‘ಮೇಕೆದಾಟು ಅಣೆಕಟ್ಟು ಕಟ್ಟಲು ಅನುಮತಿ ದೊರೆತರೆ ಮಾತ್ರ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಮನಗರ ಜಿಲ್ಲಾ ಶಾಖೆಯ ಕನಕಪುರ ಘಟಕ ಎಚ್ಚರಿಕೆ ನೀಡಿದೆ. 

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಟಕದ ಅಧ್ಯಕ್ಷ ಮಂಜೇಗೌಡ, ‘ಮೇಕೆದಾಟು ಅಣೆಕಟ್ಟನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಈಗ ಸುಮ್ಮನಾಗಿದೆ. ಇದರಿಂದ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ನಮಗೆ ನಿಮ್ಮ ಯಾವುದೇ ‘ಗ್ಯಾರಂಟಿ’ಗಳು ಬೇಕಿಲ್ಲ. ಬದಲಾಗಿ ನೀರನ್ನು ಒದಗಿಸಿ’ ಎಂದು ಆಗ್ರಹಿಸಿದರು. 

‘ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬರುವ ಮೊದಲು ಮೇಕೆದಾಟು ಪಾದಯಾತ್ರೆ ನಡೆಸಿದರು. ಆ ವೇಳೆ ಅಧಿಕಾರಕ್ಕೆ ಬಂದರೆ ಅಣೆಕಟ್ಟನ್ನು ಕಟ್ಟುತ್ತೇವೆ ಎಂದು ಭರವಸೆ ನೀಡಿದರು. ಆದರೆ, ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಿದ್ದ ಭರವಸೆಯನ್ನು ಮರೆತಿದ್ದಾರೆ. ಈಗ ಬೆಂಗಳೂರು ಸೇರಿ ವಿವಿಧೆಡೆ ನೀರಿನ ಸಮಸ್ಯೆ ಉಲ್ಬಣಿಸಿದೆ. ಇನ್ನಾದರೂ ಎಚ್ಚೆತ್ತುಕೊಂಡು ಅಣೆಕಟ್ಟನ್ನು ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT