ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆ ಸ್ಥಿತಿ: ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಕೆಶಿ

Published 3 ಜುಲೈ 2023, 23:33 IST
Last Updated 3 ಜುಲೈ 2023, 23:33 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಲ್ಲಿ ಬಾಕಿ ಇರುವ ಕಡತಗಳ ಸ್ಥಿತಿಗತಿ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಂದ ಸೋಮವಾರ ಮಾಹಿತಿ ಪಡೆದರು.

ಮೇಕೆದಾಟು ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ವಿಕಾಸಸೌಧದಲ್ಲಿ ಅವರು ಸಭೆ ನಡೆಸಿದರು.

ಸಮತೋಲನ ಜಲಾಶಯ ನಿರ್ಮಾಣಕ್ಕೆ ಬಾಕಿ ಇರುವ ಅನುಮತಿಗಳು, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಕೇಂದ್ರ ಜಲ ಆಯೋಗ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಬಾಕಿ ಇರುವ ಕಡತಗಳ ಕುರಿತು ಅಧಿಕಾರಿಗಳು ಮಾಹಿತಿ ಒದಗಿಸಿದರು. ತ್ವರಿತವಾಗಿ ಅನುಮತಿಗಳನ್ನು ಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಿವಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ಸಂಸದ ಡಿ.ಕೆ. ಸುರೇಶ್, ಶಾಸಕರಾದ ಎಚ್‌.ಸಿ. ಬಾಲಕೃಷ್ಣ, ಬಿ. ಶಿವಣ್ಣ, ಶರತ್‌ ಬಚ್ಚೇಗೌಡ, ಇಕ್ಬಾಲ್‌ ಹುಸೇನ್‌, ಡಾ.ಎಚ್‌.ಡಿ. ರಂಗನಾಥ್‌, ವಿಧಾನ ಪರಿಷತ್‌ ಸದಸ್ಯ ಎಸ್‌. ರವಿ, ಜಲ ಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್‌, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್‌. ಜಯರಾಂ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT