ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇನ್‌ಸ್ಟಾಗ್ರಾಮ್‌’ ಪರಿಚಯ; 10 ಯುವತಿಯರಿಗೆ ವಂಚನೆ; ಆರೋಪಿ ಬಂಧನ

ಅತ್ಯಾಚಾರವೆಸಗಿ ಪರಾರಿಯಾಗುತ್ತಿದ್ದ ಆರೋಪಿ ಬಂಧನ
Last Updated 8 ಏಪ್ರಿಲ್ 2021, 14:38 IST
ಅಕ್ಷರ ಗಾತ್ರ

ಬೆಂಗಳೂರು: ‘ಇನ್‌ಸ್ಟಾಗ್ರಾಮ್’ ಸಾಮಾಜಿಕ ಜಾಲತಾಣದಲ್ಲಿ ಯುವತಿಯರನ್ನು ಪರಿಚಯಿಸಿಕೊಂಡು ಸಲುಗೆ ಬೆಳೆಸಿ ಅತ್ಯಾಚಾರ ಎಸಗಿ ಪರಾರಿಯಾಗುತ್ತಿದ್ದ ಆರೋಪಿ ಹರ್ಷ ಅಲಿಯಾಸ್ ದಿವಾಕರ್‌ನನ್ನು (31) ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ತುರುವೇಕೆರೆ ನಿವಾಸಿ ಹರ್ಷ, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದ. ಆತನ ವಿರುದ್ಧ ಇತ್ತೀಚೆಗಷ್ಟೇ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಇನ್‌ಸ್ಟಾಗ್ರಾಮ್‌ನಲ್ಲಿ ಖಾತೆ ತೆರೆದಿದ್ದ ಆರೋಪಿ, ಯುವತಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ. ಚಾಟಿಂಗ್ ಮಾಡಲಾರಂಭಿಸುತ್ತಿದ್ದ. ‘ಕೆಎಎಸ್‌ ಹಾಗೂ ಐಎಎಸ್ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಸದ್ಯದಲ್ಲೇ ಪರೀಕ್ಷೆ ತೇರ್ಗಡೆಯಾಗಿ ಅಧಿಕಾರಿ ಆಗುತ್ತೇನೆ’ ಎಂದು ಆರೋಪಿ ಯುವತಿಯರಿಗೆ ಹೇಳುತ್ತಿದ್ದ.’

‘ಆರೋಪಿ ಮಾತು ನಂಬಿದ್ದ ಯುವತಿಯರು, ಆತನ ಜೊತೆ ಮಾತನಾಡಲಾರಂಭಿಸುತ್ತಿದ್ದರು. ದಿನ ಕಳೆದಂತೆ ಆರೋಪಿ, ಪ್ರೀತಿಸುವುದಾಗಿ ಹೇಳಿ ಯುವತಿಯರ ಜೊತೆ ಸಲುಗೆ ಬೆಳೆಸುತ್ತಿದ್ದ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

‘ಭೇಟಿಯಾಗಬೇಕೆಂದು ಹೇಳಿ ಯುವತಿಯರನ್ನು ತನ್ನ ಬಳಿ ಕರೆಸಿಕೊಳ್ಳುತ್ತಿದ್ದ ಆರೋಪಿ, ಅತ್ಯಾಚಾರ ಎಸಗುತ್ತಿದ್ದ. ಅದಾದ ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗುತ್ತಿದ್ದ. ಇತ್ತೀಚೆಗೆ ಬಾಲಕಿಯ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು’ ಎಂದೂ ಹೇಳಿವೆ.

‘ಆರೋಪಿ ಇದುವರೆಗೂ 10 ಯುವತಿಯರಿಗೆ ವಂಚಿಸಿರುವ ಮಾಹಿತಿ ಇದೆ. ಎಲ್ಲರಿಂದಲೂ ಹೇಳಿಕೆ ಪಡೆಯಲು ಪ್ರಯತ್ನಿಸಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT