ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆಲಸದ ಒತ್ತಡದಿಂದ ಖಿನ್ನತೆ ಸಾಧ್ಯತೆ’

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಮತ
Published 20 ಮಾರ್ಚ್ 2024, 16:30 IST
Last Updated 20 ಮಾರ್ಚ್ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ‘ಅತಿಯಾದ ಕೆಲಸದ ಒತ್ತಡದಿಂದ ಯುವಜನರು ಖಿನ್ನತೆಯಂತಹ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬಿಇಎಲ್ ಲೇಔಟ್ ಬಳಿ ನಿರ್ಮಿಸಲಾಗಿರುವ ಸುಕೂನ್ ಮಾನಸಿಕ ಆರೋಗ್ಯ ಕೇಂದ್ರವನ್ನು ನಗರದಲ್ಲಿ ಬುಧವಾರ ಉದ್ಘಾಟಿಸಿ, ಮಾತನಾಡಿದರು. ‘ಯುವಜನರಲ್ಲಿ ಮಾನಸಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಕೆಲಸದ ಒತ್ತಡ ಪ್ರಮುಖ ಕಾರಣ. ಒತ್ತಡದ ಜೀವನದಲ್ಲಿ ಕೆಲವರು ಮಾನಸಿಕವಾಗಿ ತಮ್ಮ ಸ್ಥಿಮಿತ ಕಳೆದುಕೊಳ್ಳುವ ಸಾಧ್ಯತೆಯೂ ಇರುತ್ತದೆ. ಖಿನ್ನತೆಯಿಂದ ಜೀವಕ್ಕೆ ಕುತ್ತು ತಂದುಕೊಳ್ಳುವ ಅಪಾಯವೂ ಇದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮಿದುಳು ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ನಿಮ್ಹಾನ್ಸ್ ಮಾನಸಿಕ ಆರೋಗ್ಯದ ಹಬ್ ಆಗಿ ಪರಿವರ್ತನೆಗೊಳ್ಳಲಿದೆ’ ಎಂದು ಹೇಳಿದರು.

ಮನೋವೈದ್ಯ ಡಾ.ಸತೀಶ್ ರಾಮಯ್ಯ, ‘ಮಾನಸಿಕ ಅನಾರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಗುಣಮಟ್ಟದ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ನೂತನ ಕೇಂದ್ರವನ್ನು ಆರಂಭಿಸಲಾಗಿದೆ’ ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT