ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗಳಿಗೆ ಪ್ರತ್ಯೇಕ ಮೀಟರ್‌: ಚಿಂತನೆ

ಮಂಗಳವಾರ, ಜೂಲೈ 16, 2019
26 °C

ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗಳಿಗೆ ಪ್ರತ್ಯೇಕ ಮೀಟರ್‌: ಚಿಂತನೆ

Published:
Updated:

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ ಸಮುಚ್ಚಯದ ಎಲ್ಲ ಫ್ಲ್ಯಾಟ್‌ಗಳಿಗೆ ಪ್ರತ್ಯೇಕ ಮೀಟರ್ ಅಳವಡಿಸಲು ಜಲಮಂಡಳಿ ಚಿಂತನೆ ನಡೆಸಿದೆ.

ಕಾವೇರಿ ಐದು ಹಂತದ ಯೋಜನೆಗಳ ಮೂಲಕ ಜಲಮಂಡಳಿ ನಗರಕ್ಕೆ ಪ್ರತಿನಿತ್ಯ 140 ಕೋಟಿ ಲೀಟರ್‌ ಕುಡಿಯುವ ನೀರು ಪೂರೈಕೆ ಮಾಡುತ್ತಿದೆ. ಆದರೂ, ನಗರದ ಹೊರ ವಲಯಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಾಗಿಲ್ಲ. ನಗರದಲ್ಲಿ 72 ಸಾವಿರ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಿದ್ದು, 21 ಸಾವಿರ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಷ್ಟೇ ಕಾವೇರಿ ನೀರಿನ ಸಂಪರ್ಕ ಪಡೆದಿವೆ. ಪ್ರತಿ ಫ್ಲ್ಯಾಟ್‌ಗೆ ಪ್ರತ್ಯೇಕ ಮೀಟರ್‌ ಅಳವಡಿಸಿದರೆ ಕರಾರುವಕ್ಕಾಗಿ ನೀರಿನ ಪ್ರಮಾಣವನ್ನು ಲೆಕ್ಕ ಹಾಕಲು ಸಾಧ್ಯವಾಗುತ್ತದೆ. ಅಗತ್ಯಕ್ಕಿಂತ ಹೆಚ್ಚು ಪೂರೈಕೆ ಆಗುತ್ತಿದ್ದರೆ, ಹೆಚ್ಚುವರಿ ನೀರಿಗೆ ಕತ್ತರಿ ಹಾಕಲಾಗುತ್ತದೆ. ಈ ಮೂಲಕ ನೀರಿನ ಮಿತವ್ಯಯಕ್ಕೆ ಮಂಡಳಿ ಯೋಜನೆ ರೂಪಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಲಮಂಡಳಿ ಅಧಿಕಾರಿಗಳ ಸಭೆಯಲ್ಲಿ ಈ ಯೋಜನೆಯನ್ನು ಪ್ರಸ್ತಾಪಿಸಲಾಗಿದೆ. ಶೀಘ್ರದಲ್ಲೇ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಜಲಮಂಡಳಿ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ ಎಂದು ಗೊತ್ತಾಗಿದೆ. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !