ಗುರುವಾರ , ಜುಲೈ 29, 2021
21 °C

ನಮ್ಮ ಮೆಟ್ರೊ: ಕೆಂಗೇರಿ ಮಾರ್ಗ ಪರಿಶೀಲನೆ 23ಕ್ಕೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದ ಬಹುನಿರೀಕ್ಷಿತ ಮೈಸೂರು ರಸ್ತೆ ವಿಸ್ತರಿತ ಮಾರ್ಗದ ಪರಿಶೀಲನೆಗೆ ಇದೇ 23 ಮತ್ತು 24ರಂದು ರೈಲ್ವೆ ಸುರಕ್ಷತಾ ಆಯುಕ್ತರ ತಂಡವು (ಸಿಎಂಆರ್‌ಎಸ್‌) ಭೇಟಿ ನೀಡುವ ಸಾಧ್ಯತೆ ಇದೆ.

ಉದ್ದೇಶಿತ ಮಾರ್ಗದ ಪರೀಕ್ಷಾರ್ಥ ಸಂಚಾರ ಈಗಾಗಲೇ ಪೂರ್ಣಗೊಂಡಿದ್ದು, ಪರಿಶೀಲನೆಗಾಗಿ ಬೆಂಗಳೂರು ಮೆಟ್ರೊ ನಿಗಮವು ಸಿಎಂಆರ್‌ಎಸ್‌ ಇತ್ತೀಚೆಗೆ ಆಹ್ವಾನ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಗಳು ತಂಡವು 23ರಂದು ಭೇಟಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಂಆರ್‌ಸಿಎಲ್‌ನ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್, ‘ಸಿಎಂಆರ್‌ಎಸ್‌ ತಂಡ ಭೇಟಿ ನೀಡುವ ಸಂಬಂಧ ಇದುವರೆಗೆ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಆದರೆ, ಈಗಾಗಲೇ ಆಹ್ವಾನ ನೀಡಿದ್ದು, ತಂಡವು ಶೀಘ್ರದಲ್ಲಿಯೇ ಪರಿಶೀಲನೆಗೆ ಬರಬಹುದು’ ಎಂದು ಸ್ಪಷ್ಟಪಡಿಸಿದರು.

ಸಿಎಂಆರ್‌ಎಸ್‌ ತಂಡ ಬಂದು ಪರಿಶೀಲನೆ ನಡೆಸಿ, ಸಮ್ಮತಿ ಸೂಚಿಸಿದ ನಂತರವೇ ಈ ಮೆಟ್ರೊ ರೈಲು ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ.

ನಾಯಂಡಹಳ್ಳಿಯಿಂದ ಕೆಂಗೇರಿಯವರೆಗಿನ 7.53 ಕಿ.ಮೀ. ಉದ್ದದ ಈ ವಿಸ್ತರಿತ ಮಾರ್ಗದಲ್ಲಿ ಒಟ್ಟು ಆರು ನಿಲ್ದಾಣಗಳು ಹಾಗೂ ವಾಹನ ನಿಲುಗಡೆ ಸ್ಥಳಗಳು ಬರಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು